ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
ಹೌದು, ಸಮುದ್ರಗಳ ಮೇಲ್ಮೈನಲ್ಲಿ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗುರುವಾರದಿಂದ ಉತ್ತರ ಕನ್ನಡದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಶುಕ್ರವಾರದಿಂದ ಬಯಲುಸೀಮೆಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.