WPL 2023: ಪೆರ್ರಿ, ಡಿವೈನ್‌ ಮ್ಯಾಜಿಕ್, ಕನಿಕಾ, ರಿಚಾ ಅದ್ಬುತ ಬ್ಯಾಟಿಂಗ್; ಆರ್‌ಸಿಬಿಗೆ ಭರ್ಜರಿ ಗೆಲುವು

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ಸತತ ಐವರು ಸೋಲಿನಿಂದ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡವು ಕೊನೆಗೂ ಆರನೇ ಪಂದ್ಯದಲ್ಲಿ ಗೆಲುವು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ…

RCB and UP Warriors

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ಸತತ ಐವರು ಸೋಲಿನಿಂದ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡವು ಕೊನೆಗೂ ಆರನೇ ಪಂದ್ಯದಲ್ಲಿ ಗೆಲುವು ದಾಖಲಿಸಿದೆ.

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿ ತಂಡವು 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ಇದನ್ನು ಓದಿ: BIG NEWS: 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ; ಹೈಕೋರ್ಟ್ ಮಹತ್ವದ ತೀರ್ಪು

Vijayaprabha Mobile App free

ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡವು 19.3 ಓವರ್‌ಗಳಲ್ಲಿ ಎಲ್ಲಾ ಹತ್ತು ವಿಕೆಟ್ ನಷ್ಟಕ್ಕೆ 135 ರನ್‌ ದಾಖಲಿಸಿತ್ತು. ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ 22, ಗ್ರೇಸ್ ಹ್ಯಾರಿಸ್ 46, ದೀಪ್ತಿ ಶರ್ಮಾ 22 ರನ್ ಗಳಿಸಿದರು. ಬೌಲಿಂಗ್‌ನಲ್ಲಿ RCB ಪರ ಪೆರ್ರಿ 3, ಡಿವೈನ್‌, ಆಶಾ ತಲಾ 2, ಮೇಗನ್‌, ಶ್ರೇಯಾಂಕಾ ತಲಾ 1 ವಿಕೆಟ್‌ ಪಡೆದರು.

ಇದಕ್ಕೆ ಉತ್ತರವಾಗಿ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್‌ ಗಳಿಸಿ ಗೆಲುವು ದಾಖಲಿಸಿದೆ. RCB ಪರ ಕನಿಕಾ ಅಹುಜಾ (46) ಮತ್ತು ರಿಚಾ ಘೋಷ್ (31) ಮಿಂಚಿದರು. ಯುಪಿ ಬೌಲರ್‌ಗಳ ಪೈಕಿ ದೀಪ್ತಿ ಶರ್ಮಾ 2 ವಿಕೆಟ್ ಪಡೆದರು.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ -ನರೇಶ್‌ LOVE ಟ್ರ್ಯಾಕ್‌ಗೆ BIG ಟ್ವಿಸ್ಟ್‌!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.