ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಇಂದು ಕರೆ ನೀಡಲಾಗಿದ್ದ ಮುಷ್ಕರವನ್ನು KPTCL ನೌಕರರ ಸಂಘ ಹಿಂಪಡೆದಿದ್ದು, KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಈ ಮಾಹಿತಿ ನೀಡಿದ್ದಾರೆ.
ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು 2ನೇ ಬಾರಿ ಭೇಟಿಯಾದ KPTCL ಒಕ್ಕೂಟದ ಪದಾಧಿಕಾರಿಗಳಿಗೆ ವೇತನ ಪರಿಷ್ಕರಣೆಯ ಚರ್ಚೆ ನಡೆಸಿದ್ದರು. ಈ ವೇಳೆ, ವೇತನ ಪರಿಷ್ಕರಣೆ ಕುರಿತಂತೆ ಭರವಸೆ ದೊರೆತಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದ್ದು, ಮುಷ್ಕರ ವಾಪಸ್ ಪಡೆಯಲಾಗಿದೆ ಎಂದು KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಮಾಹಿತಿ ನೀಡಿದ್ದಾರೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ, ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿತ್ತು.
ಇದನ್ನು ಓದಿ: KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !