ರಾಜ್ಯ ಸರ್ಕಾರಿ ನೌಕರರ ಸಂಘ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಾರ್ಚ್ 20ರಂದು (ಸೋಮವಾರ) ಆಚರಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆದರೆ, ಈ ರಜೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇರುವವರಿಗೆ ಮಾತ್ರ ಅನ್ವಯವಾಗಲಿದೆ. ರಜೆ ತೆಗೆದುಕೊಳ್ಳುವವರು ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಲೇಬೇಕು. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಸಮಾರಂಭ ನಡೆಯಲಿದೆ.