ದೇಶದ ವಿವಿಧ ಕಡೆ ಮುಂದಿನ ಹತ್ತು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೇಂದ್ರ, ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಸುರಿಯುವ ಈ ಅಕಾಲಿಕ ಮಳೆ ರೈತರಿಗೆ ಸಮಸ್ಯೆ ತಂದೊಡ್ಡಲಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ರಾಜ್ಯದಲ್ಲಿ ಮಳೆಯ ಮನ್ಸೂಚನೆ ಸಿಕ್ಕಿದ್ದು, ರಾಜ್ಯದ ಕೆಲವೆಡೆ ಇಂದು ಸಹ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.
ಇದನ್ನು ಓದಿ: ರಾಜ್ಯದಲ್ಲಿ ಭಾರೀ ಮಳೆ
ಇನ್ನು, ಕರಾವಳಿ ಹೊರತು ಪಡಿಸಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಬೆಂಗಳೂರು ನಗರದ ಸುತ್ತಮುತ್ತಲಿನ ಜಿಲ್ಲೆಗಳು, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಅನೇಕ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.