ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳು 3000ರೂ ನಿರುದ್ಯೋಗ ಭತ್ಯೆ..!

ಬೆಳಗಾವಿ: ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕಾಗಿ ನಾಲ್ಕನೇ ಮಹತ್ವದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಯುವ ನಿಧಿ’ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 3,000 ರೂ ನೀಡಲಾಗುವುದು ಎಂದು…

Unemployment allowance

ಬೆಳಗಾವಿ: ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕಾಗಿ ನಾಲ್ಕನೇ ಮಹತ್ವದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಯುವ ನಿಧಿ’ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 3,000 ರೂ ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ಇದನ್ನು ಓದಿ: ಈ ನಟನನ್ನು ಕೊಲ್ಲುವುದೇ ನನ್ನ ಜೀವನದ ಗುರಿ; ಜೀವ ಬೆದರಿಕೆ, ಮನೆ ಖಾಲಿ ಮಾಡಿದ ಸಲ್ಮಾನ್ ಖಾನ್‌

ಹೌದು, ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಯುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ 4ನೇ ಗ್ಯಾರಂಟಿ ಕಾರ್ಡ್ ಅನ್ನು ಬಿಡುಗಡೆ ಮಾಡಿದರು. ನಿರುದ್ಯೋಗಿ ಪದವೀಧರರಿಗೆ ಪ್ರತೀ ತಿಂಗಳು ₹3000 ಆರ್ಥಿಕ ನೆರವು ನೀಡಲಾಗುತ್ತದೆ. ಅಂತೆಯೇ ಡಿಪ್ಲೊಮಾ ಪದವೀಧರರಿಗೂ ₹1500 ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ.

Vijayaprabha Mobile App free

ಇದನ್ನು ಓದಿ: ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?

ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಒಂದೂವರೆ ವರ್ಷದಲ್ಲೇ ಭರ್ತಿ ಮಾಡುತ್ತೇವೆ ಎಂದಿದ್ದಾರೆ.

ಇದನ್ನು ಓದಿ: ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!

ಈಗಾಗಲೇ, ಕಾಂಗ್ರೆಸ್ ಪಕ್ಷ, ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000ರೂ, ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಹಾಗು ಅನ್ನ ಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿಯನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದು, ಈಗ ‘ಯುವ ನಿಧಿ’ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 3,000 ರೂ ನೀಡಲಾಗುವುದು ಎಂದು ಘೋಷಿಸಿದೆ.

ಇದನ್ನು ಓದಿ: ಖ್ಯಾತ ನಟಿಗೆ ಈ ಹೆಸರೇ ಸಮಸ್ಯೆ; ವಿಚ್ಛೇದನ ಬಳಿಕ ಎದುರಾದ ಸಮಸ್ಯೆ ಬಿಚ್ಚಿಟ್ಟ ಮಲೈಕಾ ಆರೋರ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.