ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದ್ದು, ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C ಮೀಸಲಾತಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಮುಸ್ಲಿಮರಿಗೆ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿ (EWS) ಅಡಿ ಸೇರಿಸಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಇದನ್ನು ಓದಿ: ಕ್ರಿಕೆಟ್ ಅಭಿಮಾನಿಗಳಿಗೆ Jio ವಿಶೇಷ ಕೊಡುಗೆ; 40 GB ವರೆಗೆ ಉಚಿತ ಡೇಟಾ, Jio 3 ಪ್ರಿಪೇಯ್ಡ್ ಯೋಜನೆಗಳು ಇವೆ
ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿ
ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಲಿಂಗಾಯತ ಸಮುದಾಯಕ್ಕೆ ಶೇ.2 ಹೆಚ್ಚುವರಿ ಮೀಸಲಾತಿ ಕಲ್ಪಿಸುವ ನಿರ್ಣಯ ಕೈಗೊಂಡಿದೆ. ಪರಿಶಿಷ್ಟ ಜಾತಿಯ ಆದಿ ಜಾಂಬವ ವರ್ಗಕ್ಕೆ ಶೇ.6%, ಆದಿ ಕರ್ನಾಟಕಕ್ಕೆ 5.5% & ಬಂಜಾರ, ಬೋವಿ, ಕೊರಚರಿಗೆ 4.5%, ಇತರರಿಗೆ 1%, 2C ಅಡಿಯಲ್ಲಿ ಒಕ್ಕಲಿಗರಿಗೆ 6%, 2D ಅಡಿಯಲ್ಲಿ ಲಿಂಗಾಯತರು & ಇತರರಿಗೆ 7% ಮೀಸಲಾತಿ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ 2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ
ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿಯಡಿ(EWS) ಮುಸ್ಲಿಮರಿಗೆ ಮೀಸಲಾತಿ
ಇನ್ನು, ಮುಸ್ಲಿಮರಿಗೆ ಇದ್ದ ಪ್ರತ್ಯೇಕ 2B ಮೀಸಲಾತಿ ರದ್ದುಗೊಳಿಸಲಾಗಿದ್ದು, ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿಯಡಿ(EWS) ಮುಸ್ಲಿಮರಿಗೆ ಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದು, ಕಾಡು ಕುರುಬ, ಗೊಂಡ ಕುರುಬರನ್ನ ಎಸ್‌ಟಿಗೆ ಸೇರಿಸಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದ್ದು, ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವು