ರಾಜ್ಯ ಚುನಾವಣೆ: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಈಗಾಗಲೇ ಪ್ರಕಟಿಸಿದೆ. ಏಪ್ರಿಲ್ 13ರಂದು ಅಧಿಸೂಚನೆ ಹೊರಬೀಳಲಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
38 ವರ್ಷಗಳ ಇತಿಹಾಸವನ್ನು ಮತ್ತೆ ಬರೆಯಲು ಬಿಜೆಪಿ ಸಂಕಲ್ಪ:
ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ಗೆ ಈ ಚುನಾವಣೆ ಮಹತ್ವಾಕಾಂಕ್ಷೆಯಾಗಿದೆ. 1985ರ ನಂತರ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಪಕ್ಷ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿಲ್ಲ. ಈ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವ ಮೂಲಕ 38 ವರ್ಷಗಳ ಇತಿಹಾಸವನ್ನು ಮತ್ತೆ ಬರೆಯಲು ಬಿಜೆಪಿ ಸಂಕಲ್ಪ ಮಾಡಿದೆ. 1985ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾ ಪಕ್ಷ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಮೋದಿಯವರ ವರ್ಚಸ್ಸು ಮತ್ತು ಡಬಲ್ ಎಂಜಿನ್ ಸರ್ಕಾರದ ಪ್ರಗತಿಯ ಮೇಲೆ ಬಿಜೆಪಿ ತನ್ನ ಭರವಸೆಯನ್ನು ಇಟ್ಟುಕೊಂಡಿದೆ. ಆದರೆ ಸಿ-ವೋಟರ್ ಸಮೀಕ್ಷೆಯ ಫಲಿತಾಂಶ ನೋಡಿದರೆ ಬಿಜೆಪಿ ವಿರುದ್ಧ ಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. 57 ರಷ್ಟು ಜನರು ಕರ್ನಾಟಕದಲ್ಲಿ ಆಡಳಿತ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಈ ಸಮೀಕ್ಷೆ ಬಹಿರಂಗಪಡಿಸಿದೆ.
ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ
2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಗೆಲ್ಲುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಾವೇ ನಿಜವಾದ ಪ್ರತಿಸ್ಪರ್ಧಿ ಎಂಬುದನ್ನು ಸಾಬೀತು ಪಡಿಸುವ ಆಶಯವನ್ನು ಕಾಂಗ್ರೆಸ್ ಹೊಂದಿದೆ. ಮತ್ತೊಂದೆಡೆ, ಜೆಡಿಎಸ್ ಕಿಂಗ್ ಮೇಕರ್ ಆಗಿ ಹೊರಹೊಮ್ಮುವ ಭರವಸೆ ಹೊಂದಿದೆ.
ಕಾಂಗ್ರೆಸ್ ಪಕ್ಷ 124 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಜೆಡಿಎಸ್ 93 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆಮ್ ಆದ್ಮಿ ಪಕ್ಷವೂ ಈ ಬಾರಿ ರಾಜ್ಯ ಪ್ರವೇಶಿಸಿದ್ದು, ಪಕ್ಷವು ಈಗಾಗಲೇ ತನ್ನ ಪ್ರಣಾಳಿಕೆಯನ್ನು ಪ್ರಕಟಿಸಿದೆ. ಗಾಲಿ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ), ನಟ ಉಪೇಂದ್ರ ಅವರ ಪ್ರಜಕೀಯ ಪಕ್ಷ, ಎಡಪಕ್ಷಗಳು, ಬಿಎಸ್‌ಪಿ, ಓವೈಸಿ ನೇತೃತ್ವದ ಮಜ್ಲಿಸ್ ಪಾರ್ಟಿ, ಎಸ್‌ಡಿಪಿಐ ಮತ್ತು ಇತರ ಪಕ್ಷಗಳು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ಆದರೆ ಮುಖ್ಯವಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆಯುವ ಸಾಧ್ಯತೆ ಹೆಚ್ಚು.
ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ
ಸಾಮಾಜಿಕ ಗುಂಪುಗಳ ಪ್ರಕಾರ ವೋಟ್ ಬ್ಯಾಂಕ್ ಹೀಗಿದೆ:
ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ರಾಜ್ಯಾದ್ಯಂತ ಹರಡಿಕೊಂಡಿದ್ದರೆ, ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಬಿಜೆಪಿ ಪ್ರಬಲವಾಗಿದೆ. ವೀರಶೈವ-ಲಿಂಗಾಯತ ಸಮುದಾಯ ಈ ಕ್ಷೇತ್ರಗಳಲ್ಲಿ ಪ್ರಮುಖ ಮತಬ್ಯಾಂಕ್ ಆಗಿದೆ. ಒಕ್ಕಲಿಗರು ಹೆಚ್ಚಾಗಿರುವ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ರಾಜ್ಯದ ಚುನಾವಣೆಯ ಮೇಲೆ ಜಾತಿ ಪ್ರಭಾವ ಹೆಚ್ಚಿದೆ. ಲಿಂಗಾಯತರು ರಾಜ್ಯದ ಜನಸಂಖ್ಯೆಯಲ್ಲಿ 17 ಪ್ರತಿಶತದಷ್ಟಿದ್ದರೆ, ಒಕಲಿಗರು 15 ಪ್ರತಿಶತದಷ್ಟಿದ್ದಾರೆ. OBCಗಳು 35 ಪ್ರತಿಶತ, SC/ST ಗಳು 18 ಪ್ರತಿಶತ, ಆದರೆ ಮುಸ್ಲಿಮರು ಸುಮಾರು 13 ಪ್ರತಿಶತ. ಬ್ರಾಹ್ಮಣರು ಶೇಕಡಾ 3 ರಷ್ಟಿದ್ದಾರೆ.
ಇದನ್ನು ಓದಿ: ಏಪ್ರಿಲ್ 1 ರಿಂದ ಇವುಗಳ ಬೆಲೆ ಭಾರೀ ಹೆಚ್ಚಳ: ಯಾವುದು ದುಬಾರಿ? ಯಾವುದು ಅಗ್ಗ? ಇಲ್ಲಿದೆ ನೋಡಿ
ಮೋದಿ ಮೇಲೆಯೇ ಬಿಜೆಪಿಗೆ ಆಶಯ :
ರಾಜ್ಯ ವಿಧಾನಸಭೆಯ 224 ಸ್ಥಾನಗಳಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಅಧಿಕಾರದಲ್ಲಿರುವುದರಿಂದ ಬಿಜೆಪಿಗೆ ವಿರೋಧ ವ್ಯಕ್ತವಾಗುವುದು ಸಹಜ.. ಮೋದಿ ವರ್ಚಸ್ಸು, ಹಿಂದುತ್ವ ಕಾರ್ಡ್ ಮತ್ತು ಡಬಲ್ ಇಂಜಿನ್ ಸರ್ಕಾರದಿಂದ ಸಾಧಿಸಿದ ಪ್ರಗತಿಯ ಮೇಲೆ ಪಕ್ಷವು ತನ್ನ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಮೊದಲಿನಿಂದಲೂ ಪಕ್ಷದಲ್ಲಿ ಇರುವವರಿಗೆ ಇತ್ತೀಚಿನ ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆಯಾದವರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವುದು ಬಿಜೆಪಿಗೆ ತಲೆನೋವಾಗಿದೆ. 2018 ರಲ್ಲಿ, ರಾಜ್ಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಆದರೆ ಬಹುಮತ ಸಾಧಿಸಲು ಸಾಧ್ಯವಾಗಲಿಲ್ಲ. ಹಳೆ ಮೈಸೂರು ಪ್ರದೇಶದಲ್ಲಿ 89 ವಿಧಾನಸಭಾ ಸ್ಥಾನಗಳಿವೆ.ಇಲ್ಲಿ ಬಿಜೆಪಿ ದುರ್ಬಲವಾಗಿದೆ. 2008 ಮತ್ತು 2018 ರಲ್ಲಿ, ಈ ಪ್ರದೇಶದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು, ಪೂರ್ಣ ಬಹುಮತ ಸಾಧಿಸಲು ಸಾಧ್ಯವಾಗಲಿಲ್ಲ.
ಇದನ್ನು ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ
ನಿರ್ಣಾಯಕ ಪಾತ್ರ ವಹಿಸಲಿರುವ ಲಿಂಗಾಯತರು:
ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದ್ದಾರೆ. ಆದರೆ ಬಿಜೆಪಿ ಅವರ ಸೇವೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದೆ. ಯಡಿಯೂರಪ್ಪನವರನ್ನು ಬಿಜೆಪಿ ಕಡೆಗಣಿಸಿದೆ ಎಂದು ಪ್ರಚಾರ ಮಾಡುವ ಮೂಲಕ ಲಿಂಗಾಯತ ಮತದಾರರನ್ನು ಓಲೈಸಲು ಕಾಂಗ್ರೆಸ್ ಆಶಿಸುತ್ತಿದೆ. ಕರ್ನಾಟಕದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರು ಪ್ರಭಾವ ಬೀರಬಹುದು. ಪ್ರಸ್ತುತ ವಿಧಾನಸಭೆಯಲ್ಲಿ 54 ಲಿಂಗಾಯತ ಶಾಸಕರಿದ್ದರೆ, ಬಿಜೆಪಿಯ 37 ಶಾಸಕರಿದ್ದಾರೆ. 1952 ರಿಂದ ಇಲ್ಲಿಯವವರೆಗೆ 23 ಮುಖ್ಯಮಂತ್ರಿಗಳನ್ನು ಹೊಂದಿದ್ದು, ಅವರಲ್ಲಿ ಹತ್ತು ಮಂದಿ ಲಿಂಗಾಯತ ಸಮುದಾಯಕ್ಕೆ ಸೇರಿದವರು.
ಕರ್ನಾಟಕ ಕಾಂಗ್ರೆಸ್ ಗೆ ಎಷ್ಟು ಮುಖ್ಯ?
ಇತ್ತೀಚೆಗಷ್ಟೇ ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಚುನಾವಣೆ ನಿರ್ಣಾಯಕವಾಗಿದೆ. ಕರ್ನಾಟಕದಲ್ಲಿ ಗೆದ್ದರೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಆತ್ಮಸ್ಥೈರ್ಯ ಹೆಚ್ಚಲಿದೆ. ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಗೆದ್ದರೆ ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್‌ಗೆ ಅಗತ್ಯವಾದ ಮನೋಬಲ ಸಿಗಲಿದೆ. ಕಾಂಗ್ರೆಸ್ ಪಕ್ಷ ಈ ಮೂರು ರಾಜ್ಯಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಿದರೆ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಕಾಂಗ್ರೆಸ್ ಬಲಿಷ್ಠವಾಗಿದೆ.. ಆದರೆ ತಪ್ಪು ಗೊಂದಲ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಪ್ರತಿಪಕ್ಷಗಳಿಗೆ ಪ್ರಮುಖ ಪ್ರಚಾರ ಸಾಧನವಾಗುವ ಸಾಧ್ಯತೆ ಇದೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದರಿಂದ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮಹತ್ವಾಕಾಂಕ್ಷೆಯಿಂದ ತೆಗೆದುಕೊಳ್ಳುತ್ತಿದೆ. ಇದು ತಮ್ಮ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣಗಳ ಜಗಳ ಪಕ್ಷಕ್ಕೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜಿ.ಪರಮೇಶ್ವರ, ಎಚ್.ಕೆ.ಪಾಟೀಲ್ ಅವರಂತಹ ನಾಯಕರನ್ನು ಬದಿಗೊತ್ತಿದ್ದು, ಟಿಕೆಟ್ ಸಿಗದವರು ಬಂಡಾಯವೆದ್ದಿರುವುದು ಕಾಂಗ್ರೆಸ್ ಗೆ ಕಂಟಕ ತಂದಿದೆ.
ಇದನ್ನು ಓದಿ: ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್
ಮತ್ತೊಮ್ಮೆ ‘ಮ್ಯಾಜಿಕ್’ ಮೇಲೆ ಜೆಡಿಎಸ್ ನಿರೀಕ್ಷೆ
2018ರ ಚುನಾವಣೆಯ ನಂತರ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಮತ್ತೊಮ್ಮೆ ಅದೇ ಮ್ಯಾಜಿಕ್ ರಿಪೀಟ್ ಮಾಡುವ ನಿರೀಕ್ಷೆಯಲ್ಲಿದೆ. ಆದರೆ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಕುಟುಂಬದಲ್ಲಿ ಬಿನ್ನಾಭಿಪ್ರಾಯ ಪಕ್ಷಕ್ಕೆ ಮೈನಸ್ ಆಗಲಿದೆ. 1999ರಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್ ಇದುವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಎರಡು ಬಾರಿ ಅಧಿಕಾರಕ್ಕೆ ಬಂದಿತ್ತು.
ಇದನ್ನು ಓದಿ: ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?
2006ರಲ್ಲಿ ಬಿಜೆಪಿ ಜತೆಗಿನ ಮೈತ್ರಿಯಿಂದಾಗಿ ಜೆಡಿಎಸ್ 20 ತಿಂಗಳು ಅಧಿಕಾರದಲ್ಲಿತ್ತು. 2018ರ ಚುನಾವಣೆ ಬಳಿಕ ಕುಮಾರಸ್ವಾಮಿ ಅವರು ಕಾಂಗ್ರೆಸ್ ಬೆಂಬಲದೊಂದಿಗೆ 14 ತಿಂಗಳು ಸಿಎಂ ಆಗಿದ್ದರು. ಈ ಬಾರಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಜೆಡಿಎಸ್ ‘ಮಿಷನ್ 123’ ಗುರಿ ಇಟ್ಟುಕೊಂಡಿದೆ. ಆದರೆ ಅದು ಅಷ್ಟು ಸುಲಭವಲ್ಲ. 2004ರಲ್ಲಿ 58 ಸ್ಥಾನ ಗೆದ್ದಿದ್ದ ಜೆಡಿಎಸ್ 2013ರಲ್ಲಿ 40 ಸ್ಥಾನ ಗಳಿಸಿತ್ತು. 2018ರಲ್ಲಿ 37 ಸೀಟುಗಳಿಗೆ ಸೀಮಿತವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದಾಗಿ ಸಿಎಂ ಸ್ಥಾನ ಗಳಿಸಿದೆ.
ಇದನ್ನು ಓದಿ: ಮೂರೇ ದಿನ ಬಾಕಿ: ನಿಮ್ಮ ಪ್ಯಾನ್, ಆಧಾರ್ ಲಿಂಕ್ ಮಾಡ್ಬೇಕಾ? ಆಧಾರ್ ಜೊತೆ ಪಾನ್ ಲಿಂಕ್ ಮಾಡುವ ಮುನ್ನ ಎಚ್ಚರ, ಎಚ್ಚರ!