ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
ಇದನ್ನು ಓದಿ: ಗಮನಿಸಿ: ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಈ ಸಲ ಒಟ್ಟು 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಪಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮ ತಡೆಯಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ರಾಜ್ಯದಲ್ಲಿ ಮಾ.31ರಿಂದ (ನಾಳೆಯಿಂದ) ಎಸ್.ಎಸ್.ಎಲ್‍ಸಿ. ಪರೀಕ್ಷೆ ಆರಂಭಗೊಳ್ಳಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.
ಇದನ್ನು ಓದಿ: ಏಪ್ರಿಲ್ 1 ರಿಂದ ಇವುಗಳ ಬೆಲೆ ಭಾರೀ ಹೆಚ್ಚಳ: ಯಾವುದು ದುಬಾರಿ? ಯಾವುದು ಅಗ್ಗ? ಇಲ್ಲಿದೆ ನೋಡಿ
ಇನ್ನು, ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಬೇರೆ ಯಾರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದನ್ನು ಓದಿ: ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?