Budget 2023 : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿರುವ 14ನೇ ರಾಜ್ಯ ಬಜೆಟ್ 2023-24 ಹಲವು ಇಲಾಖೆಗಳಿಗೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದೂ, ಇಲಾಖಾವಾರು ಘೋಷಣೆ ಮೊತ್ತ ಕೆಳಗಿನಂತಿದೆ
- ಶಿಕ್ಷಣ ಇಲಾಖೆ 37,587 ಕೋಟಿ
- ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ
- ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ
- ಲೋಕೋಪಯೋಗಿ ಇಲಾಖೆ 10,143 ಕೋಟಿ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,166 ಕೋಟಿ
- ಇಂಧನ ಇಲಾಖೆ 22,773 ಕೋಟಿ
- ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ
- ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ
- ಕಂದಾಯ ಇಲಾಖೆ 16,167 ಕೋಟಿ
- ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ
- ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು
- ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು
- ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ
- ಇತರೆ 1,09,639 ಲಕ್ಷ ಕೋಟಿ
Budget 2023 : ನೀರಾವರಿ ಯೋಜನೆಯಡಿ 70 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ ಯೋಜನೆ
- 770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
- ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್.ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 3 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕರೆ ತು೦ಬಿಸುವ ಯೋಜನೆ ಅನುಷ್ಠಾನ.
- ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಕ್ರಮ.
- ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ.
ಇದನ್ನು ಓದಿ: ಪೆಟ್ರೋಲ್, ಎಣ್ಣೆಗಿಂತ ಟೊಮೆಟೊ ಬೆಲೆ ಜಾಸ್ತಿ.. 250 ರೂ ತಲುಪಿದ ಟೊಮೆಟೊ; ಯಾವ ನಗರದಲ್ಲಿ ಬೆಲೆ ಹೇಗಿದೆ?
Budget 2023 : ಸಹಕಾರ ಮತ್ತು ರೇಷ್ಮೆ; ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದಿಂದ 5 ಲಕ್ಷ ರೂ. ಸಾಲ
- ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷ ರೂ. ಗಳಿಗೆ ಹೆಚ್ಚಳ.
- ಶೇ.3 ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಳ,
- 30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ.
- ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ,
- ರೇಷ್ಮೆ ನೂಲು ಬಿಚ್ಚಾಣಿಕದಾರರಿಗೆ 5 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.
- ಕೃಷಿ ಮತ್ತು ತೋಟಗಾರಿಕೆ ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿ
- ನವೋದ್ಯಮ ಹೊಸ ಯೋಜನೆಯಡಿ ಕೃಷಿ ಉದ್ಯಮಗಳಿಗೆ ನಾವೀನ್ಯತೆಯನ್ನು ಪ್ರೋತ್ಸಾಹಿಸಲು 10 ಕೋಟಿ ರೂ. ನೆರವು
- ಕೃಷಿ ಯಾಂತ್ರೀಕರಣಕ್ಕೆ ಪ್ರೋತ್ಸಾಹ: ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಹೈಟೆಕ್ ಹಾರ್ವೆಸ್ಟ ಹಬ್ ಸ್ಥಾಪನೆಗೆ 50 ಕೋಟಿ ರೂ. ಅನುದಾನ. FPO ಗಳಿಗೆ ಪ್ರೋತ್ಸಾಹ
- GI TAG ಹೊಂದಿರುವ ಕಾಫಿ, ಮೈಸೂರು ಮಲ್ಲಿಗೆ, ನಂಜನಗೂದು ರಸಬಾಳೆ, ಮೈಸೂರು ವೀಳೆದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಮಾಡಲು ಕ್ರಮ
ಇದನ್ನು ಓದಿ: ಸಂಚಲನ ಸೃಷ್ಟಿಸಿದ Jio, ಕೇವಲ ₹999ಕ್ಕೆ 4G ಫೋನ್; ಅನಿಯಮಿತ ಕರೆಗಳು, ಡೇಟಾ!
Budget 2023: ಮೀನುಗಾರಿಕೆ ಮತ್ತು ಪಶು ಸಂಗೋಪನೆ
- ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 3 ಲಕ್ಷ ರೂ. ಗಳಿಗೆ ಹೆಚ್ಚಳ,
- ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.
- ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್ಗಳನ್ನು ಪೆಟ್ರೋಲ್/ಡೀಸಲ್ ಇಂಜಿನ್ಗಳಾಗಿ ಬದಲಾಯಿಸಲು ತಲಾ
- 50,000 ರೂ. ಸಹಾಯಧನ: ಐದು ಕೋಟಿ ರೂ. ನೆರವು.
- ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ.
- ನಂದಿನಿ ಹೈನು ಉತ್ಪನ್ನಗಳ ಬ್ರಾಂಡನ್ನು ಇನ್ನಷ್ಟು ವಿಸ್ತರಿಸಿ, ಬೆಳೆಸಲು ಸರ್ಕಾರದ ಆದ್ಯತೆ.
Budget 2023: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ.ಅಕ್ಕಿ ಮತ್ತು ಪ್ರತಿ ಫಲಾನುಭವಿಗೆ 170 ರೂ.
- ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
- ಅರ್ಹ ಫಲಾನುಭವಿಗಳಿಗೆ 5 ಕೆ.ಜಿ. ಹೆಚ್ಚುವರಿ ಆಹಾರಧಾನ್ಯ ವಿತರಣೆ
- ಆಹಾರಧಾನ್ಯ ಲಭ್ಯವಾಗುವವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
- ಅಂದಾಜು 442 ಕೋಟಿ ಫಲಾನುಭವಿಗಳಿಗೆ ಅನುಕೂಲ: ಈ ಯೋಜನೆಗೆ 10,275 ಕೋಟಿ ರೂ. ಅನುದಾನ
ಇದನ್ನು ಓದಿ: ರಾಜ್ಯದಲ್ಲಿ ಭಾರೀ ಮಳೆ; ಶಾಲಾ-ಕಾಲೇಜುಗಳಿಗೆ ರಜೆ?
Budget 2023: ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ನೆರವು
- ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ನೆರವು ನೇರ ವರ್ಗಾವಣೆ
- ಈ ಯೋಜನೆಗೆ ವಾರ್ಷಿಕ ಅಂದಾಜು 30,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ
- ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ
- ಬೆಲೆ ಏರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ನೆಮ್ಮದಿ
- ಸುಮಾರು 130 ಕೋಟಿ ಮಹಿಳೆಯರಿಗೆ ಈ ಯೋಜನೆಯಿಂದ ಲಾಭ
Budget 2023: ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ
- ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.
- ಈ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿದ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.
- 1ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ: 60 ಲಕ್ಷ ಮಕ್ಕಳಿಗೆ ಅನುಕೂಲ 280 ಕೋಟಿ ರೂ. ಅನುದಾನ.
- ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 850 ಕೋಟಿ ರೂ. ಅನುದಾನ,
- ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ. ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ಉನ್ನತೀಕರಣಕ್ಕೆ ಕ್ರಮ.
Budget 2023: ಯುವನಿಧಿ ಯೋಜನೆಯಡಿ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ
- 2023 ರಲ್ಲಿ ಪದವಿ ಪಡೆದು 6 ತಿಂಗಳವರೆಗೂ ಉದ್ಯೋಗ ಲಭಿಸದ ಯುವಜನರಿಗೆ 2 ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ
- ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
- ಡಿಪ್ಲೋಮೋ ಹೊಂದಿರುವವರಿಗೆ ಪ್ರತಿ ತಿಂಗಳು 1500 ರೂಪಾಯಿ
- ನಾಡಿನ ಯುವ ಜನತೆಗೆ ಆರ್ಥಿಕ ನೆರವು ನೀಡಿ ಆತ್ಮವಿಶ್ವಾಸ ತುಂಬಿ ಬದುಕಿನಲ್ಲಿ ನೆಲೆ ಕಂಡುಕೊಳ್ಳಲು ಸಹಾಯ
- ಸುಮಾರು 3.1 ಲಕ್ಷ ಯುವಜನರಿಗೆ ಈ ಯೋಜನೆಯಿಂದ ಲಾಭ
Budget 2023: ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ
- ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ. 10 ರಷ್ಟು ಹೆಚ್ಚುವರಿ ಯೂನಿಟ್ ವಿದ್ಯುತ್ ಉಚಿತ 200 ಯೂನಿಟ್ ವರೆಗೆ
- ವಾರ್ಷಿಕ ಅ೦ದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
- 2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ (ಪ್ರತಿ ಕುಟುಂಬಕ್ಕೆ ಪ್ರತಿಯೊಬ್ಬ ವ್ಯಕ್ತಿಗೆ ಇಂಧನ ಖಾತರಿ ನೀಡುವ ಯೋಜನೆ.
Budget 2023: ಬೆಂಗಳೂರು ಅಭಿವೃದ್ಧಿ
- ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಬ್ರಾಂಡ್ ಬೆಂಗಳೂರು ಪರಿಕಲ್ಪನೆ ಜಾರಿ.
- ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ.
- ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ ಆಡಳಿತ.
- ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಕ್ರಮ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ.. ಮತ್ತೆ 3 ತಿಂಗಳು ವಿಸ್ತರಣೆ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.