Annabhagya Yojana: ಕಾಂಗ್ರೆಸ್ ಘೋಷಿಸಿದ ಗ್ಯಾರೆಂಟಿಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುವ ಯೋಜನೆಯು ಇದೇ ತಿಂಗಳ ಜು.10 ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರವು ಗುರುವಾರ ಅಧಿಕೃತ ಆದೇಶ ಹೊರಡಿಸಿದೆ. ಜೊತೆಗೆ ಈ ಯೋಜನೆಯಡಿ ಅರ್ಹ ಪಡಿತರ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯ ವಿಸ್ತರಿಸುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಅನ್ನಬಾಗ್ಯ ಯೋಜನೆಗೆ ಸರ್ಕಾರ ಕೆಲ ಮಾರ್ಗಸೂಚಿ ಪ್ರಕಟ!!
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರೆಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ನಗದು ವರ್ಗಾವಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸುಮಾರು 15 ಅಂಶಗಳನ್ನು ಹೊಂದಿದೆ.
- ಜುಲೈ ಅಂತ್ಯೋದಯ, ಪಿಎಚ್‌ಎಚ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ನಗದು ವರ್ಗಾವಣೆ ಪ್ರಾರಂಭ
- ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯ ಪಡೆದುಕೊಂಡಿರುವ ಕುಟುಂಬಗಳು ನಗದು ಸೌಲಭ್ಯ ಪಡೆಯಲು ಅರ್ಹ.
- 5 ಕೆ.ಜಿ, ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ 34 ರೂಪಾಯಿಯಂತೆ 5 ಕಿಲೋಕ್ಕೆ 170 ರೂಪಾಯಿಯನ್ನು ಪಡಿತರ ಕುಟುಂಬದ ಮುಖ್ಯಸ್ಮರ ಖಾತೆಗೆ ನಗದು.
- ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು, ಮನೆ ಸದಸ್ಯರ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿರಬೇಕು. ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
- ಅಂತ್ಯೋದಯ ಕಾರ್ಡ್ ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಫಲಾನುಭವಿಗಳಿಗೆ ನಗದು ವರ್ಗಾವಣೆ ಸೌಲಭ್ಯ ಸಿಗುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.
ಇದನ್ನು ಓದಿ: ರಾಜ್ಯದಾತ್ಯಂತ ಭಾರೀ ಮಳೆ, ಈ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
ಬಿಪಿಎಲ್ ಕಾರ್ಡ್‌ನಿಂದ ಅಕ್ಕಿಯನ್ನು ಪಡೆದುಕೊಂಡವರಿಗೆ ಮಾತ್ರ ಅಕ್ಕಿ ಹಣ!!
ಅಕ್ಕಿ ಪಡೆದುಕೊಂಡವರಿಗೆ ಮಾತ್ರ ಅಕ್ಕಿಯ ಹಣವನ್ನು ಸರ್ಕಾರ ವರ್ಗಾವಣೆ ಮಾಡಲು ಚಿಂತನೆ ನಡೆಸಿದೆ. ಆಹಾರ ಭದ್ರತೆ ಕಾಯ್ದೆಯಡಿ ನೀಡಲಾಗುತ್ತಿರುವ ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯನ್ನು ನೀಡಲಾಗುತ್ತಿದೆ. ಅಲ್ಲದೆ, ಈ ಹಿಂದೆ ಅಕ್ಕಿ ಪಡೆದುಕೊಳ್ಳದ ಜನರಿಗೆ ಅಕ್ಕಿಯ ಅವಶ್ಯತೆವಿಲ್ಲವೆಂಬಂತೆ ಕಾಣುತ್ತದೆ ಎಂಬ ಅಂಶ ಅರಿತುಕೊಂಡಿರುವ ಸರ್ಕಾರ, ಅಕ್ಕಿ ಹಾಗೂ ಅಕ್ಕಿ ಬದಲು ನೀಡುತ್ತಿರುವ ಹಣವನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕೆಂದು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ಯಾವ ಇಲಾಖೆಗೆ ಎಷ್ಟು ಕೋಟಿ? ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ
170 ರೂ., 340 ರೂ., 850 ರೂ. ಹೀಗೆ ಸಿಗುತ್ತೇ..ಅಕ್ಕಿ ಹಣ..
ಪ್ರತಿ ಕೆಜಿ ಅಕ್ಕಿಯ ಬೆಲೆ 34 ರೂ.ಗಳನ್ನು ನಿಗದಿಪಡಿಸಲಾಗಿದ್ದು, ಒಬ್ಬರು ಇರುವ ಕುಟುಂಬಕ್ಕೆ 5 ಕೆಜಿ ಅಕ್ಕಿಯನ್ನು ನಿಗದಿಗೊಳಿಸಲಾಗಿದ್ದು, ಇಬ್ಬರು ಇರುವ ಕುಟುಂಬಕ್ಕೆ 10 ಕೆಜಿ, ಐವರು ಇರುವ ಕುಟುಂಬಕ್ಕೆ 25 ಕೆಜಿಯಂತೆ ಅಕ್ಕಿಯನ್ನು ನೀಡಲು ತೀರ್ಮಾನಿಲಾಗಿದೆ. ಅದರಂತೆ ಈ ಕುಟುಂಬಗಳಿಗೆ ಕ್ರಮವಾಗಿ 170 ರೂ, 340 ರೂ, 850 ರೂ ಸಿಗಲಿದ್ದು, ಈ ಹಣದ ಜೊತೆಗೆ ಕೇಂದ್ರದಿಂದ ಬರುವ ಅಕ್ಕಿಯನ್ನು ಪಡೆಯಲೇಬೇಕು ಎಂದು ಸರ್ಕಾರ ಹೇಳಿದೆ.
ಅನ್ನಭಾಗ್ಯ ಖಾತೆಯ ನೇರ ಹಣ ವರ್ಗಾವಣೆ
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಹೇಳಿದ್ದಾರೆ. ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದು, 15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನು ಓದಿ: ಪೆಟ್ರೋಲ್, ಎಣ್ಣೆಗಿಂತ ಟೊಮೆಟೊ ಬೆಲೆ ಜಾಸ್ತಿ.. 250 ರೂ ತಲುಪಿದ ಟೊಮೆಟೊ; ಯಾವ ನಗರದಲ್ಲಿ ಬೆಲೆ ಹೇಗಿದೆ?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |