heavy rain: ಮುಂದಿನ ನಾಲ್ಕು ದಿನ ಭಾರಿ ಮಳೆ; ಐಎಂಡಿ ಕೊಟ್ಟ ಎಚ್ಚರಿಕೆ ಸಂದೇಶವೇನು!?

heavy rain: ಕರ್ನಾಟಕದ ಕೆಲವಡೆ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…

heavy rain

heavy rain: ಕರ್ನಾಟಕದ ಕೆಲವಡೆ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
heavy rain

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಗೊತ್ತಾ? ಹೀಗೆ ತಿಳಿದುಕೊಳ್ಳಿ

Vijayaprabha Mobile App free

heavy rain: ಐಎಂಡಿ ಕೊಟ್ಟ ಎಚ್ಚರಿಕೆ ಸಂದೇಶವೇನು?

ಇನ್ನು, ಆಗಸ್ಟ್ 25ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೆ ಎಂದು ಐಎಂಡಿ ಸೂಚಿಸಿದೆ. ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂಕುಸಿತ ಉಂಟಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಭೂ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿ, 439 ಅಪಾಯಕಾರಿ ಸ್ಥಳಗಳನ್ನು ಕೂಡ ಗುರುತಿಸಿದೆ.

ಇದನ್ನು ಓದಿ: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿ ಸಾವು

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.