Heavy rain: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆ ಮತ್ತೊಮ್ಮೆ ಅಬ್ಬರಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಸಂಜೆಯಿಂದ ಭಾನುವಾರದ ತನಕ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹೆಚ್ಚು ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವಿಪರೀತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾ., ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ಇದನ್ನು ಓದಿ: ಬಿಪಿಎಲ್ ಕಾಡ್೯ದಾರರಿಗೆ ಬಿಗ್ ಶಾಕ್; ರೇಷನ್ ಕಾರ್ಡ್ ಪಡೆಯಲು ನೀವು ಅರ್ಹರಾ ಚೆಕ್ ಮಾಡಿ!
ಇನ್ನು, ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲು, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Heavy rain: ಈ ರಾಜ್ಯದಲ್ಲಿ ಮುಂದಿನ 4 ದಿನಗಳಲ್ಲಿ ಭಾರೀ ಮಳೆ!
ಹಿಮಾಚಲದಲ್ಲಿ ಮಳೆಯ ಅರ್ಭಟಕ್ಕೆ ಇಡೀ ರಾಜ್ಯವೇ ಹೀನಾಯ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆದರೆ ಮುಂದಿನ 4 ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಎಡೆಬಿಡದೆ ಸುರಿಯುತ್ತಿರುವ ಮಳೆಗೆ 71 ಮಂದಿ ಪ್ರಾಣಕಳೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ಆಗಸ್ಟ್ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
ಇದನ್ನು ಓದಿ: ರೈತರೇ 15ನೇ ಕಂತಿನ ಹಣ ಯಾವಾಗ ಗೊತ್ತಾ? ಪಟ್ಟಿಲಿ ನಿಮ್ಮ ಹೆಸರು ಇದೀಯಾ ಚೆಕ್ ಮಾಡಿ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |