Dengue: ಮಹಾಮಾರಿ ಡೆಂಗ್ಯೂ ಆರ್ಭಟ; 2,374 ಡೆಂಗ್ಯೂ ಪ್ರಕರಣ ದಾಖಲು!

Dengue: ಇಡೀ ರಾಜ್ಯದಲ್ಲಿ ಅತೀ ಹೆಚ್ಚಿನ ಡೆಂಗ್ಯೂ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವವರ ಸಂಖ್ಯೆ ಅನಿರೀಕ್ಷಿತ ಮಟ್ಟದಲ್ಲಿ ಏರಿಕೆ ಆಗಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ಬಿಬಿಎಂಪಿ ಆರೋಗ್ಯ…

Dengue

Dengue: ಇಡೀ ರಾಜ್ಯದಲ್ಲಿ ಅತೀ ಹೆಚ್ಚಿನ ಡೆಂಗ್ಯೂ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವವರ ಸಂಖ್ಯೆ ಅನಿರೀಕ್ಷಿತ ಮಟ್ಟದಲ್ಲಿ ಏರಿಕೆ ಆಗಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ.

Dengue
Dengue

ಬಿಬಿಎಂಪಿ ಆರೋಗ್ಯ ವರದಿಯಲ್ಲಿ ಆಗಸ್ಟ್ ಒಂದೇ ತಿಂಗಳಲ್ಲಿ ಬರೊಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿ ಆಗಿದ್ದು, ಈ ಸಂಬಂಧ ಬಿಬಿಎಂಪಿ ಹೈ ಅಲರ್ಟ್ ಆಗಿದೆ. ವಾರದಿಂದ ವಾರಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಬಂದಿದ್ದು, ಈ ಸಂಬಂಧ ನಿಮ್ಮ ಮನೆಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Jawaan: ಜವಾನ್‌ ಸಿನಿಮಾದ ಕಲೆಕ್ಷನ್ ಸುನಾಮಿ, ಒಂದೇ ದಿನದಲ್ಲಿ ₹120 ಕೋಟಿ

Dengue: ಡೆಂಗ್ಯೂ ಹರಡಲು ಪ್ರಮುಖ ಕಾರಣ

ಬಿಟ್ಟೂಬಿಡದೆ ಬರುತ್ತಿರುವ ಮಳೆ, ಡೆಂಗ್ಯೂ ಹರಡಲು ಪ್ರಮುಖ ಕಾರಣ. ನಿಂತಿರುವ ನೀರಿನಲ್ಲಿ ಸೊಳ್ಳೆಗಳು ಉತ್ಪಾದನೆಯಾಗುತ್ತವೆ. ಜ್ವರ ಬಂದರೆ ನಿರ್ಲಕ್ಷಿಸಬೇಡಿ ಎಂದು ಸೂಚನೆ ನೀಡಿರುವ ಆರೋಗ್ಯ ಇಲಾಖೆ, ಸಕಾಲದಲ್ಲಿ ಚಿಕಿತ್ಸೆ ಪಡೆಯುವಂತೆ ನಾಗರಿಕರಲ್ಲಿ ಮನವಿ ಮಾಡಿದೆ. ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆಯೂ ಸೂಚಿಸಿದೆ.

Vijayaprabha Mobile App free

heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

Dengue: ಡೆಂಗ್ಯೂ ಹರಡದಂತೆ ಕ್ರಮ

  • ಮಳೆಗಾಲ ಹಿನ್ನೆಲೆಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ, ಏಕೆಂದರೆ ಡೆಂಗ್ಯೂ ಹರಡುವ ಸೊಳ್ಳೆಗಳು ಇಂತಹ ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸಾಧ್ಯತೆಯಿರುವುದರಿಂದ ಸದಾ ಜಾಗೃತರಾಗಿರುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.
  • BBMP ವ್ಯಾಪ್ತಿಯಲ್ಲಿ ಜ್ವರ, ಆಯಾಸದಂತೆ ಲಕ್ಷಣಗಳಿಂದ ಸಾಕಷ್ಟು ಮಂದಿ ಆಸ್ಪತ್ರೆಗೆ ಬರುತ್ತಿದ್ದು,ತಪಾಸಣೆ ಬಳಿಕ ಅವರಿಗೆ ಡೆಂಗ್ಯೂ ಬಂದಿರುವುದು ತಿಳಿದಿದ್ದು,ಇಂತಹ ಲಕ್ಷಣಗಳು ಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡುವಂತೆ ಬಿಬಿಎಂಪಿ ತಿಳಿಸಿದೆ.
  • ಕರ್ನಾಟಕದ ವಿವಿಧೆಡೆ ಸಹ ಈ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವುದು ಕಂಡು ಬಂದಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್ ತಿಂಗಳಲ್ಲಿ ಕೇವಲ 689 ರಷ್ಟು ಡೆಂಗ್ಯೂ ಪ್ರಕರಣಗಳು ವರದಿ ಆಗಿದ್ದವು. ನಂತರದ ಜುಲೈ ತಿಂಗಳಲ್ಲಿ ಎರಡು ಪಟ್ಟು ಪ್ರಕರಣಗಳು ಹೆಚ್ಚಾಗಿದ್ದು, ಒಟ್ಟು 1,649 ಮಂದಿಗೆ ಡೆಂಗ್ಯೂ ಕಾಯಿಲೆ ಗೆ ತುತ್ತಾಗಿದ್ದಾರೆ.

Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.