Ration Card Update: ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಶಾಕ್ ನೀಡಿದ್ದು, ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ 3 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳಲ್ಲಿ 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತವಾಗಿವೆ.
ಇದನ್ನೂ ಓದಿ: ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ಹೀಗೆ ಮಾಡುವುದು ಒಳ್ಳೆಯದು, ಒಮ್ಮೆ ಚೆಕ್ ಮಾಡಿ
ಫಲಾನುಭವಿಗಳ ಮಾಹಿತಿಯ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾಯಿಸಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಿತ್ತು. ಇದೀಗ 3.18 ಲಕ್ಷ ಅರ್ಜಿಗಳು ತಿದ್ದುಪಡಿಗೆ ಬಂದಿದ್ದು, 1,47,646 ಪುರಸ್ಕೃತಗೊಂಡರೆ, 93,362 ಅರ್ಜಿಗಳು ತಿರಸ್ಕೃತವಾಗಿವೆ.

Ration Card Update: ಅರ್ಜಿಗಳ ತಿರಸ್ಕಾರಕ್ಕೆ ಕಾರಣವೇನು?
ಸರಕಾರದ ಯೋಜನೆಗಳ ಲಾಭ ಪಡೆಯುವ ಉದ್ದೇಶದಿಂದ ರೇಷನ್ ಕಾರ್ಡ್‌ಗಳಲ್ಲಿ ತಮ್ಮ ನೆರೆ ಹೊರೆಯವರ ಹೆಸರುಗಳನ್ನೂ ಸೇರಿಸಲು ಮುಂದಾಗಿರುವುದು ಪತ್ತೆಯಾಗಿದೆ. ಒಂದೇ ಮನೆಯ ಸದಸ್ಯರಿಂದ ಪ್ರತ್ಯೇಕ ಕಾರ್ಡ್‌ಗಳಿಗಾಗಿಯೂ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲಿಸಿದಾಗ ಈ ಮಾಹಿತಿ ಹೊರಬಿದ್ದಿದೆ.
ಸದ್ಯ ರೇಷನ್ ಕಾರ್ಡ್ ತಿದ್ದುಪಡಿಗೆ ಸಲ್ಲಿಸಿದ ಇಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸದ್ಯ ತಿದ್ದುಪಡಿಗೆ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: ಉಬ್ಬಿರುವ ರಕ್ತನಾಳಗಳನ್ನು ತೊಡೆದುಹಾಕಲು, ರಕ್ತದ ಹರಿವನ್ನು ಹೆಚ್ಚಿಸಲು ನೈಸರ್ಗಿಕ ಮಾರ್ಗಗಳು
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |