LIC HFL Vidyadhan Scholarship 2023: ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಿಂದ ಧನಸಹಾಯ ಪಡೆದ ಎಲ್‌ಐಸಿ ಎಚ್‌ಎಫ್‌ಎಲ್ ವಿದ್ಯಾಧನ್ ವಿದ್ಯಾರ್ಥಿವೇತನವು ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದಲ್ಲಿ ಸಹಾಯ ಮಾಡುವ ಗುರಿಯನ್ನು ಹೊಂದಿದೆ. 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಕಡಿಮೆ ಆದಾಯದ ಹಿನ್ನೆಲೆಯ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಈ ಸ್ಕಾಲರ್‌ಶಿಪ್ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು 25,000 ರೂ.ವರೆಗೆ ಆರ್ಥಿಕ ನೆರವು ಪಡೆಯಬಹುದು

ಯಾರಿಗೆ ಎಷ್ಟು ವಿದ್ಯಾರ್ಥಿವೇತನ?
10 ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿದ 11 ನೇ ತರಗತಿಯ ವಿದ್ಯಾರ್ಥಿಗಳು 15,000 ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪಡೆಯಬಹುದು.
ಭಾರತದಲ್ಲಿ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 3-ವರ್ಷದ ಪದವಿ ಕೋರ್ಸ್ ನಲ್ಲಿ ಮೊದಲ ವರ್ಷದಲ್ಲಿರುವ ವಿದ್ಯಾರ್ಥಿಗಳು ಮೂರು ವರ್ಷಗಳವರೆಗೆ ವರ್ಷಕ್ಕೆ 25,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.
ಭಾರತದಲ್ಲಿ ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ನಲ್ಲಿ ಮೊದಲ ವರ್ಷದಲ್ಲಿರುವ ವಿದ್ಯಾರ್ಥಿಗಳು ಎರಡು ವರ್ಷಗಳ ಅವಧಿಗೆ ವಾರ್ಷಿಕ 20,000 ಮೊತ್ತದ ವಿದ್ಯಾರ್ಥಿ ವೇತನ ಪಡೆಯಲು ಅರ್ಹರು.
ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ?
- ಅಭ್ಯರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
- ಅಭ್ಯರ್ಥಿಗಳ ಕುಟುಂಬದ ಒಟ್ಟು ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 3,60,000.ರೂ. ಮೀರಬಾರದು.
ಬೇಕಾಗುವ ಅಗತ್ಯ ದಾಖಲೆಗಳು
- ಅಭ್ಯರ್ಥಿಗಳ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
- ಅಭ್ಯರ್ಥಿಯ ಹಿಂದಿನ ತರಗತಿಯ ಮಾರ್ಕ್ ಕಾರ್ಡ್
- ಸರ್ಕಾರದಿಂದ ನೀಡುವ ಆಧಾರ್ ಕಾರ್ಡ್/ವೋಟರ್ ಐಡಿ/ಚಾಲನಾ ಪರವಾನಗಿ/ಪ್ಯಾನ್ ಕಾರ್ಡ್ ಸೇರಿದಂತೆ ವಿವಿಧ ಗುರುತಿನ ಚೀಟಿ
- ಪ್ರಸಕ್ತ ವರ್ಷದ ಪ್ರವೇಶದ ಪುರಾವೆ (Proof of admission)
- ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಪಾವತಿಸಿದ ಶುಲ್ಕದ ರಸೀದಿ
- ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆ ಮಾಹಿತಿ ( ರಾಷ್ಟ್ರೀಕೃತ ಬ್ಯಾಂಕ್) ಒದಗಿಸಬೇಕು. (ಗ್ರಾಮೀಣ/ಸಹಕಾರಿ ಬ್ಯಾಂಕ್‌ಗಳನ್ನು ಅನುಮತಿಸಲಾಗುವುದಿಲ್ಲ)
- ಆದಾಯ ಪ್ರಮಾಣಪತ್ರ
- ಅಂಗವೈಕಲ್ಯ ಮತ್ತು ಜಾತಿ ಪ್ರಮಾಣಪತ್ರ ಪುರಾವೆ (ಅನ್ವಯಿಸಿದರೆ ಮಾತ್ರ)
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 30-09-2023 ಇಂದೇ ಕೊನೆ ದಿನ
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ