koosina mane: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇವುಗಳಲ್ಲಿ ಎರಡು ಯೋಜನೆಗಳು ಸಂಪೂರ್ಣವಾಗಿ ಮಹಿಳೆರಿಗೇ ಮೀಸಲಾಗಿದೆ. ಈ ಬೆನ್ನಲ್ಲೇ ಮಹಿಳೆಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ.
koosina mane: 3 ವರ್ಷದೊಳಗಿನ ಮಕ್ಕಳಿಗೆ ಶಿಶು ಪಾಲನಾ ಕೇಂದ್ರ
ಹೌದು, ‘ನರೇಗೌ ಕ್ರಿಯಾಶೀಲ ಉದ್ಯೋಗ ಚೀಟಿ’ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಮಕ್ಕಳಿಗೆ ಈ ಕೂಸಿನ ಮನೆ ಆಶ್ರಯ (ಶಿಶು ಪಾಲನಾ ಕೇಂದ್ರ) ನೀಡಲಿದ್ದು, ಗಾಂಧಿ ಜಯಂತಿ ದಿನವಾದ ಇಂದು ಈ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ನಿಮ್ಮ ಬಳಿ ATM ಕಾರ್ಡ್ ಇದೆಯೇ? ಈ ಕಾರ್ಡ್ ಇದ್ದರೆ ರೂ.10 ಲಕ್ಷದವರೆಗೆ ಉಚಿತ ಪ್ರಯೋಜನ!
koosina mane: ಕೂಸಿನ ಮನೆ ಶಿಶುವಾಲನಾ ಕೇಂದ್ರ
ಪ್ರಸಕ್ತ 2023-24ರ ಅಯವ್ಯಯ ಬಜೆಟ್ ನಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು “ಕೂಸಿನ ಮನೆ” ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಇದನ್ನೂ ಓದಿ:ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್; LPG ಸಿಲಿಂಡರ್ ದರ ಭಾರೀ ಏರಿಕೆ
“ಕೂಸಿನ ಮನೆ’ ಕೆಂದ್ರಗಳು (ಶಿಶು ಪಾಲನಾ ಕೇಂದ್ರ) ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಇನ್ನು, ಗ್ರಾಮ ಪಂಚಾಯಿತಿಗಳೇ “ಕೂಸಿನ ಮನೆ’ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |