PM Kisan 15th Installment: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಪಿಎಂ ಕಿಸಾನ್ ಯೋಜನೆಯ 15ನೇ ಕಂತನ್ನು ಅರ್ಹ ರೈತರ ಖಾತೆಗೆ ಜಮಾ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ನೀವು PM ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ನೀವು ಶೀಘ್ರದಲ್ಲೇ 15 ನೇ ಕಂತನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ DBT (ನೇರ ಲಾಭ ವರ್ಗಾವಣೆ) ವಿಧಾನದ ಮೂಲಕ ಪಡೆಯುತ್ತೀರಿ.
ಇದನ್ನೂ ಓದಿ: ನಿಮ್ಮ ಆಧಾರ್ ಮೊಬೈಲ್ ಸಂಖ್ಯೆ ಬದಲಾಯಿಸಬೇಕೆ? ಈ ರೀತಿ ಸುಲಭವಾಗಿ ಬದಲಾಯಿಸಿ
ಕೇಂದ್ರ ಸರ್ಕಾರ ಈಗಾಗಲೇ ಜುಲೈ 27 ರಂದು ಈ ಯೋಜನೆಯ 14 ನೇ ಕಂತಿನ ಬಿಡುಗಡೆ ಮಾಡಿದೆ. ಈ ಯೋಜನೆಯ 15ನೇ ಕಂತಿನ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ನವೆಂಬರ್ 30ರೊಳಗೆ ಕೇಂದ್ರ ಸರಕಾರ ಜಮಾ ಮಾಡಲಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಪಿಎಂ ಕಿಸಾನ್ 15 ನೇ ಕಂತು ಪಡೆಯಲು ಬಯಸುವ ರೈತರು ಖಂಡಿತವಾಗಿಯೂ ಇ-ಕೆವೈಸಿ ಪೂರ್ಣಗೊಳಿಸಬೇಕು.
ದೇಶದ ಬಡ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎಂಬ ಯೋಜನೆಯನ್ನು ಜಾರಿಗೆ ತಂದಿರುವುದು ಗೊತ್ತೇ ಇದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರವು ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳನ್ನು ರೂ. 2,000 ನಂತೆ ಒಟ್ಟು ರೂ. 6000 ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಪಿಎಂ ಕಿಸಾನ್ ಯೋಜನೆಯ 15 ನೇ ಕಂತಿಗೆ ಅರ್ಜಿ ಸಲ್ಲಿಸಿ…
- ಮೊದಲು ನೀವು www.pmkisan.gov.in ವೆಬ್ಸೈಟ್ಗೆ ಭೇಟಿ ನೀಡಿ, ಲಾಗಿನ್ ಮಾಡಿ ನಂತರ ‘ಫಾರ್ಮರ್ಸ್ ಕಾರ್ನರ್’ ವಿಭಾಗಕ್ಕೆ ಹೋಗಿ.
- ಇಲ್ಲಿ ನೀವು ‘ಹೊಸ ರೈತ ನೋಂದಣಿ (New Farmer Registration)’ ಎಂಬ ಆಯ್ಕೆಯನ್ನು ನೋಡುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.
- ಅದರಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ (‘Yes’) ಆಯ್ಕೆಯನ್ನು ಕ್ಲಿಕ್ ಮಾಡಿ.
- ನಂತರ PM-ಕಿಸಾನ್ ಅರ್ಜಿ ನಮೂನೆ 2023 ಅನ್ನು ಭರ್ತಿ ಮಾಡಿ
ಇದನ್ನೂ ಓದಿ: ಜಿಯೋ ಬಳಕೆದಾರರಿಗೆ ಬಂಪರ್ ಆಫರ್; 3 ಹೊಸ ರೀಚಾರ್ಜ್ ಯೋಜನೆಗಳು
PM Kisan: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
- ಮೊದಲು www.pmkisan.gov.in ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಲಾಗಿನ್ ಮಾಡಿ.
- ಅದರ ನಂತರ ‘ಫಾರ್ಮರ್ಸ್ ಕಾರ್ನರ್’ (‘Farmer’s Corner’) ಮೇಲೆ ಕ್ಲಿಕ್ ಮಾಡಿ ಮತ್ತು ‘ಬೆನಿಫಿಶಿಯರಿ ಸ್ಟೇಟಸ್’ (Beneficiary Status’) ಎಂಬ ಆಯ್ಕೆ ಕಾಣಿಸಿಕೊಳ್ಳುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾದ ವಿವರಗಳನ್ನು ನಮೂದಿಸಿ ಮತ್ತು ‘ಡೇಟಾ ಪಡೆಯಿರಿ (‘Get Data’) ಆಯ್ಕೆಯನ್ನು ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ಫಲಾನುಭವಿಯ ಸ್ಥಿತಿಯು (beneficiary status) ಪರದೆಯ ಮೇಲೆ ಕಾಣಿಸುತ್ತದೆ.
ಇದನ್ನೂ ಓದಿ: ವೃತ್ತಿಪರ ಸೇವಾ ಪ್ರತಿನಿಧಿ, ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನ; ಇಂದೇ ಕೊನೆ ದಿನ
ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವುದು ಹೇಗೆ?
- ಮೊದಲು www.pmkisan.gov.in ವೆಬ್ಸೈಟ್ಗೆ ಭೇಟಿ ನೀಡಿ, ಲಾಗಿನ್ ಆಗಿ.
- ನಂತರ ‘ಬೆನಿಫಿಷಿಯರಿ ಪಟ್ಟಿ’ (‘Beneficiary List’) ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
- ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಗ್ರಾಮ ಮುಂತಾದ ವಿವರಗಳನ್ನು ಆಯ್ಕೆಮಾಡಿ
- ನಂತರ ‘ಗೆಟ್ ರಿಪೋರ್ಟ್’ (‘Get Report’) ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |