karnataka budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಕಲ್ಯಾಣಕ್ಕಾಗಿ ಪ್ರಮುಖ ಯೋಜನೆ ಘೋಷಿಸಿದ್ದಾರೆ. ರೈತರ ಸಮಗ್ರ ಏಳಿಗೆಗಾಗಿ ರೈತ ಸಮೃದ್ಧಿ ಯೋಜನೆ ಪ್ರಕಟಿಸಿದ್ದಾರೆ. ಕೃಷಿ ಭಾಗ್ಯ ಯೋಜನೆಗೆ 200 ಕೋಟಿ ರೂ. ಗಳನ್ನು ಮಂಜೂರು ಮಾಡಿದರು.
- ರೈತ ಸಮೃದ್ಧಿ ಯೋಜನೆ ಘೋಷಣೆ
- ಒಂದೇ ಸೂರಿನಡಿ ತೋಟಗಾರಿಕೆ ಉತ್ಪನ್ನ ಮಾರಾಟ
- ಕಿಸಾನ್ ಮಾಲ್‌ಗಳ ಮೂಲಕ ತೋಟಗಾರಿಕೆ ಉತ್ಪನ್ನ ಮಾರಾಟ
- 5 ಸಾವಿರ ಸಣ್ಣ ಸರೋವರಗಳ ನಿರ್ಮಾಣಕ್ಕೆ ಕ್ರಮ, ಹನಿ ನೀರಾವರಿಗೆ ಆದ್ಯತೆ
karnataka budget 2024: ಸುಸ್ಥಿ ಸಾಲದ ಬಡ್ಡಿ ಮನ್ನಾ ಘೋಷಣೆ
ರಾಜ್ಯದ ರೈತರ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಹಾಗೂ ಪಿಕಾರ್ಡ್ ಬ್ಯಾಂಕ್‌ಗಳಲ್ಲಿ ರೈತರು ಮಾಡಿದ ಮಧ್ಯಮ ಹಾಗೂ ಸುದೀರ್ಘ ಅವಧಿಯ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಇದಕ್ಕಾಗಿ 450 ಕೋಟಿ ಅನುದಾನ ನೀಡುವುದಾಗಿ ಪ್ರಕಟಿಸಿದ್ದಾರೆ. ಸರ್ಕಾರದ ಈ ಕ್ರಮದಿಂದಾಗಿ 57 ಸಾವಿರ ರೈತರಿಗೆ ಅನುಕೂಲವಾಗಲಿದೆ.
ಇದನ್ನು ಓದಿ: ಒಂದಕ್ಕಿಂತ ಹೆಚ್ಚು EPF ಖಾತೆಗಳನ್ನು ಹೊಂದಿರುವಿರಾ? ವಿಲೀನಗೊಳಿಸುವ ಸರಳ ಪ್ರಕ್ರಿಯೆ ಇಲ್ಲಿದೆ!
karnataka budget 2024: 250 ಕೋಟಿ ರ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ
ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ನೀಡಲಾಗಿದೆ. ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟಿ ರ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ ರೂ.30 ಹೆಚ್ಚಳ ಮಾಡಲಾಗಿದೆ.
ಇದನ್ನು ಓದಿ:ರೈತರಿಗೆ ಕೇಂದ್ರ ಸರ್ಕಾರದ ಯೋಜನೆಗಳು.. ಯಾವ ಯೋಜನೆಯಿಂದ ಏನು ಲಾಭ?
karnataka budget 2024: ಕೃಷಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಕೊಡುಗೆ ಏನು?
- ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ ಸ್ಥಾಪನೆ
- ವಿಜಯಪುರದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ
- ರೈತ ಮಹಿಳೆಯರಿಗೆ ಹಸು, ಎಮ್ಮೆ ಖರೀದಿಗೆ ಸಹಾಯಧನ
- ಕೃಷಿ, ತೋಟಗಾರಿಕೆ ಉತ್ಪನ್ನಗಳ ರಫ್ತು ಉತ್ತೇಜನಕ್ಕೆ 80 ಕೋಟಿ ರೂ. ಮೀಸಲು
- ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್
- ಕೃಷಿ ಸ್ಟಾರ್ಟಪ್ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ
- APMCಗಳಲ್ಲಿ ವಿದ್ಯುತ್ ಚಾಲಿತ ವಾಹನ, APMC ಅಭಿವೃದ್ಧಿಗೆ ಆದ್ಯತೆ
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |