CAA Act: ಕೇಂದ್ರದಿಂದ ಐತಿಹಾಸಿಕ ಘೋಷಣೆ; CAA ಕಾಯಿದೆ ಜಾರಿ, ಸಿಎಎ ಎಂದರೇನು ಗೊತ್ತಾ?

CAA Act: ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯ ಕುರಿತಾಗಿ ಐತಿಹಾಸಿಕ ಘೋಷಣೆ ಮಾಡಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ & ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚಲು ದಾರಿ ಮಾಡಿಕೊಡುವ ಪೌರತ್ವ ತಿದ್ದುಪಡಿ…

CAA Act vijayaprabha news

CAA Act: ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯ ಕುರಿತಾಗಿ ಐತಿಹಾಸಿಕ ಘೋಷಣೆ ಮಾಡಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ & ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚಲು ದಾರಿ ಮಾಡಿಕೊಡುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಗೃಹ ಸಚಿವಾಲಯ (ಎಂಎಚ್‌ಎ) ಅಧಿಕೃತವಾಗಿ ಪ್ರಕಟಿಸಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಇಂಥವರ ರೇಷನ್ ಕಾರ್ಡ್ ರದ್ದು..!

CAA Act: ಸಿಎಎ ಎಂದರೇನು ಗೊತ್ತಾ?

CAA Act vijayaprabha news
CAA Act enacted by Central Govt

ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ & ಅಫ್ಘಾನಿಸ್ತಾನದಿಂದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವುದು ಪೌರತ್ವ ತಿದ್ದುಪಡಿ ಕಾಯ್ದೆ (CAA) ಉದ್ದೇಶವಾಗಿದೆ. ಎನ್‌ಡಿಎ ಸರ್ಕಾರವು 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು 2019ರಲ್ಲಿ ಕಾನೂನಾಗಿ ಮಾಡಿತು.

Vijayaprabha Mobile App free

ಧರ್ಮದ ಆಧಾರದಲ್ಲಿ ಈ ಕಾಯ್ದೆ ತರಲಾಗುತ್ತಿದೆ ಎಂದು ಆರೋಪಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಹಾಗಾಗಿ ಇದರ ಜಾರಿಗೆಗೆ ತಡೆಹಿಡಿಯಲಾಗಿತ್ತು. ಇದೀಗ ಚುನಾವಣೆಗೂ ಮುನ್ನವೇ ಕೇಂದ್ರ ಅಧಿಸೂಚನೆ ಪ್ರಕಟಿಸಿದೆ.

ಇದನ್ನು ಓದಿ: ಮಾರ್ಚ್ 15 ರ ನಂತರ Paytm FASTag ಕಾರ್ಯನಿರ್ವಹಿಸುತ್ತದೆಯೇ ಅಥವಾ ಇಲ್ಲವೇ? ಇಲ್ಲಿದೆ ಮಾಹಿತಿ

CAA Act: CAA ಕಾಯಿದೆಯ ಹಿನ್ನೆಲೆ..

CAA ಕಾಯಿದೆಯನ್ನು ಕೇಂದ್ರ ಸರ್ಕಾರವು ಅಧಿಕೃತವಾಗಿ ಜಾರಿಗೊಳಿಸಿದೆ. ಇದರಡಿ ನೆರೆ ದೇಶಗಳಾದ ಬಾಂಗ್ಲಾದೇಶ, ಪಾಕಿಸ್ತಾನ & ಅಫ್ಘಾನಿಸ್ತಾನದಿಂದ 2014ರ ಡಿ.31ಕ್ಕೂ ಮುನ್ನ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ಪೌರತ್ವ ಪಡೆಯುವ ಅವಕಾಶವಿದೆ. ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ & ಪಾರ್ಸಿಗಳಿಗೆ ಮನ್ನಣೆ ಕೊಡಲಾಗಿದೆ. ಹಿಂದಿನ ಕಾನೂನಿನ ಪ್ರಕಾರ, ಯಾವುದೇ ವ್ಯಕ್ತಿ ಪೌರತ್ವ ಹೊಂದಬೇಕಾದರೆ 11 ವರ್ಷ ವಾಸ ಮಾಡಬೇಕಿತ್ತು.

ಇದನ್ನು ಓದಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ವಿವಾಹ ನೋಂದಣಿ ಇದೀಗ ಇನ್ನಷ್ಟು ಸುಲಭ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.