ಬೆಂಗಳೂರು: ರಾಜ್ಯದಲ್ಲೀಗ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದಿನಿಂದ ಇನ್ನೂ 4 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇಂದಿನಿಂದ ಜೂನ್ 14 ರವರೆಗೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗೋಕರ್ಣ, ಬೀದರ್, ಧಾರವಾಡ, ಗದಗ, ಕಲಬುರಗಿ, ಕಾರವಾರ, ಮಡಿಕೇರಿ, ಮಂಗಳೂರು, ಮೈಸೂರು, ರಾಯಚೂರು, ಹಾಗೂ ಉಡುಪಿ ಸೇರಿದಂತೆ ಹಲವೆಡೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.