ದಾವಣಗೆರೆಯಲ್ಲಿ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ದಾವಣಗೆರೆ ಜೂ.20 : ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು…

teacher-job-vijayaprabha-news

ದಾವಣಗೆರೆ ಜೂ.20 : ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಜೂ.28 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆ.10 ಗಂಟೆಯಿಂದ ಸಂ.05 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ ದೂ.ಸಂ 0821-2515944 ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ತಿಳಿಸಿದ್ದಾರೆ.

 

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.