ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಪ್ರಕಾರ, ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹದ ಕಾರಣ ಬುಧವಾರ 12 ಜನರು ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಮಳೆ ಸಂಬಂಧಿತ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ100ಕ್ಕೆ ತಲುಪಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಾಗಾವ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದೋಣಿ ಮೂಲಕ ಪ್ರಯಾಣಿಸಿ ಪರಿಸ್ಥಿತಿ ಅವಲೋಕಿಸಿದ್ದು, ಪ್ರತಿ ಬಾರಿಯಂತೆ ಈ ವರ್ಷವೂ ಮಳೆಯಿಂದ ಅಸ್ಸಾಂನ ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆ- ಜಾನುವಾರಗಳನ್ನು ಕಳೆದುಕೊಂಡು ಅತಂತ್ರರಾಗಿದ್ದು, ವಿವಿಧ ಜಿಲ್ಲೆಗಳ ಹಲವು ಹಳ್ಳಿಗಳು ಕಳೆದ ಒಂದು ತಿಂಗಳಿನಿಂದ ಜಲಾವೃತವಾಗಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.