ಮೈಸೂರು: ಶಾಲಾ ಮಕ್ಕಳಿಗೆ ಈ ವರ್ಷವೇ ಸೈಕಲ್, ಶೂ ವಿತರಿಸಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಹೌದು, ಮೈಸೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸೈಕಲ್ ಮತ್ತು ಶೂ ವಿತರಿಸಲು ಕೊಂಚ ತಡವಾಯಿತು. ಆದರೆ ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈಗಾಗಲೇ ಗಮನ ಹರಿಸಿದ್ದಾರೆ. ಶೀಘ್ರವೇ ಎರಡೂ ಸೌಲಭ್ಯಗಳು ಮಕ್ಕಳ ಕೈ ಸೇರಲಿವೆ ಎಂದು ಹೇಳಿದ್ದಾರೆ.
ಇನ್ನು ಸೈಕಲ್, ಶೂ ವಿತರಿಸುವುದು ತಡವಾಗಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.