ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ, ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಲ್ಲಿ ನಿರಂತರ ಮಳೆಯಾಗುತ್ತಿದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡದ ಕ್ಯಾಸಲ್ ರಾಕ್ ಸೇರಿ 8 ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗಿಂತಲೂ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದ್ದಾರೆ.
ಇನ್ನು, ಭಾರಿ ಮಳೆಯಿಂದ ಉಂಟಾದ ಹಾನಿ ವೀಕ್ಷಣೆಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಭೇಟಿ ನೀಡುವರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.