ಕೇಂದ್ರ ಸರ್ಕಾರ ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ಹೊರಟಿರುವುದನ್ನು ಖಂಡಿಸಿ ಜುಲೈ 15ರಂದು ಇಂದು ರಾಜ್ಯದಾದ್ಯಂತ ಅಕ್ಕಿ ಗಿರಣಿಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲು ರಾಜ್ಯ ಅಕ್ಕಿ ಗಿರಣಿದಾರರ ಸಂಘ ನಿರ್ಧರಿಸಿದೆ.
ಹೌದು, ‘ಆಹಾರ ಧಾನ್ಯಗಳ ಮೇಲೆ ಜಿಎಸ್‌ಟಿ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ. ಇದನ್ನು ವಿರೋಧಿ ಗಿರಣಿದಾರರೆಲ್ಲ ಬಂದ್‌ಗೆ ಕರೆ ನೀಡಿದ್ದೇವೆ’ ಎಂದು ಸಂಘದ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಎರಡು ದಿನ ಗಿರಣಿ, ಅಕ್ಕಿ ಸಗಟು ಮಾರಾಟ ಬಂದ್:
ಆಹಾರ ಧಾನ್ಯಗಳ ಮೇಲೆ ಶೇ 5ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿರುವುದನ್ನು ಖಂಡಿಸಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದಿಂದ ಜುಲೈ ಇಂದು ಹಾಗೂ ನಾಳೆ ಅಕ್ಕಿಗಿರಣಿಗಳು ಹಾಗೂ ಅಕ್ಕಿ ಸಗಟು ವಹಿವಾಟು ಬಂದ್ ಆಗಲಿದೆ.
ಹೌದು, ಅಕ್ಕಿ, ಜೋಳ, ರಾಗಿ ಸೇರಿದಂತೆ ದವಸ ಧಾನ್ಯಗಳ ಮೇಲೆ ಜುಲೈ 18ರಿಂದ ಶೇ 5ರಷ್ಟು ತೆರಿಗೆ ವಿಧಿಸುವುದಾಗಿ ಜಿಎಸ್‌ಟಿ ಮಂಡಳಿಯು ತಿಳಿಸಿದ್ದು, ಇದನ್ನು ವಿರೋಧಿಸಿ ರಾಜ್ಯದಾದ್ಯಂತ ಅಕ್ಕಿ ಗಿರಣಿಗಳನ್ನು ಬಂದ್ ಮಾಡಲು ಕರ್ನಾಟಕ ರಾಜ್ಯ ಅಕ್ಕಿಗಿರಣಿಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ತಿಳಿಸಿದರು.