ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿರುವುದರಿಂದ ರಾಜ್ಯದ ಕೆಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, 8 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…

rain vijayaprabha news

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿರುವುದರಿಂದ ರಾಜ್ಯದ ಕೆಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, 8 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದ್ದು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ಕರಾವಳಿ ಭಾಗದಲ್ಲಿ ಜುಲೈ 19ರವರೆಗೆ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದೂ ಎಚ್ಚರಿಕೆ ನೀಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.