ಎಚ್ಚರಿಕೆ: ರಾಜ್ಯದಲ್ಲಿ ಜು.20ರವರೆಗೆ ಭಾರೀ ಮಳೆ; ಹಲವು ಕಡೆ ಪ್ರವಾಹ ಭೀತಿ

ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜುಲೈ 20 ರವರಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಾದಾಮಿ, ಬಳ್ಳಾರಿ, ಬೆಳಗಾವಿ,…

heavy rain vijayaprabha news

ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜುಲೈ 20 ರವರಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಾದಾಮಿ, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ಶಿವಮೊಗ್ಗ, ಕೋಲಾರ, ಗದಗ, ತುಮಕೂರು, ಹಂಪಿ, ಕಲಬುರ್ಗಿ, ಮಂಡ್ಯ, ಮೈಸೂರು, ವಿಜಯಪುರ ಸುತ್ತಮುತ್ತ ಮಳೆಯಾಗುವ ನಿರೀಕ್ಷೆ ಇದೆ. ಗೋಕರ್ಣ, ಹೊನ್ನಾವರ, ಕಾರವಾರ, ಮಡಿಕೇರಿ ಮತ್ತು ಮಂಗಳೂರಿನಲ್ಲಿ ಇದೇ 19 ರವರೆಗೆ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೇಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.