ಅಯೋಧ್ಯೆ ರಾಮಮಂದಿರ-ಬಾಬರಿ ಮಸೀದಿ ವಿವಾದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡವರ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ಹಾಜಿ ಮೆಹಬೂಬ್ ಮತ್ತು ಸೈಯದ್ ಅಖ್ಲಾಕ್ ಅಹ್ಮದ್ ಅವರ ಪರವಾಗಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಹೌದು, 6 ತಿಂಗಳ ಹಿಂದೆ ಪ್ರಕರಣ ದಾಖಲಾಗಿದ್ದು, ನಾಳೆ ಜುಲೈ 18 ರಂದು ವಿಚಾರಣೆ ನಡೆಯಲಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಸಾಧ್ವಿ ಋತಂಭರ, ಪ್ರಸ್ತುತ ರಾಮಮಂದಿರ ಟ್ರಸ್ಟ್‌ನ ಅಧ್ಯಕ್ಷೆ ನೃತ್ಯ ಗೋಪಾಲ್ ದಾಸ್, ಉಮಾಭಾರತಿ ಮತ್ತು ಬಿಜೆಪಿ ನಾಯಕ ವಿನಯ್ ಸಿಂಗ್ ಸೇರಿದಂತೆ 32 ಮಂದಿ ಆರೋಪಿಗಳಾಗಿದ್ದಾರೆ.
ಇದೀಗ ಈ ರಿಟ್ ಅರ್ಜಿಯಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕಾರಣದ ಉಳಿದ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮನವಿ ಮಾಡಲಾಗಿದೆ.