ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಿ.ಪಿ.ಎಲ್ ಕುಟುಂಬಗಳಿಗೆ ಸೇರಿದ ಗ್ರಾಹಕರಿಗೆ ಮಾಸಿಕ 75 ಯೂನಿಟ್ ತನಕ ಉಚಿತ ವಿದ್ಯುತ್ ಅನ್ನು ಬೆಸ್ಕಾಂ ಒದಗಿಸುತ್ತಿದೆ. ಇನ್ನು, ಈ ಸೌಲಭ್ಯ ಪಡೆಯಲು ಅರ್ಹ ಗ್ರಾಹಕರು ಬೆಸ್ಕಾಂ ಉಪ ವಿಭಾಗದಲ್ಲಿ ಅರ್ಜಿಯೊಂದಿಗೆ ಸಂಬಂದಿಸಿದ ದಾಖಲೆಗಳನ್ನು ಸಲ್ಲಿಸಬೇಕು.
ಈ ಸೌಲಭ್ಯಕ್ಕೆ ಅರ್ಹರಾಗುವ ವಿದ್ಯುತ್ ಗ್ರಾಹಕರು ಮಾಸಿಕ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ, ಸದರಿ ಗ್ರಾಹಕರುಗಳಿಗೆ DBT ಯೋಜನೆಯ ವ್ಯವಸ್ಥೆಯಡಿ ಸರ್ಕಾರದಿಂದ ಸಹಾಯ ಧನ ನೀಡುವ ಮುಖಾಂತರ ಮರು ಪಾವತಿಸಲಾಗುವುದು.
ಸೌಲಭ್ಯ ಪಡೆಯಲು ಅರ್ಹ ಗ್ರಾಹಕರು ಬೆಸ್ಕಾಂ ಉಪ ವಿಭಾಗದಲ್ಲಿ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
ಅರ್ಜಿದಾರರ ಬಿಪಿಎಲ್ ರೇಷನ್‌ಕಾರ್ಡ್ (ಆರ್.ಸಿ ಸಂಖ್ಯೆ ಸಹಿತ) ಜೆರಾಕ್ಸ್ ಪ್ರತಿ.
ಅರ್ಜಿದಾರರ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ.
ಅರ್ಜಿದಾರರ ಜಾತಿ ಪ್ರಮಾಣ ಪತ್ರ (ಆರ್.ಡಿ ಸಂಖ್ಯೆ ಸಹಿತ) ಜೆರಾಕ್ಸ್ ಪ್ರತಿ
ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯನ್ನು ಕಚೇರಿಗೆ ಸಲ್ಲಿಸಬೇಕು.