ಸಿಬಿಎಸ್ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದ ವಿವರಗಳು cbseresult.nic.in ಮತ್ತು result.cbsc.nic.in ವೆಬ್ಸೈಟ್ನಲ್ಲಿ ಲಭ್ಯವಾಗಲಿವೆ.
ಇನ್ನು ಸಿಬಿಎಸ್ಇ ಮಂಡಳಿಯ ವೆಬ್ಸೈಟ್ ಜೊತೆಗೆ result.gov.in ಮತ್ತು digilocker.gov.in ಜಾಲತಾಣಗಳಲ್ಲಿಯೀ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ವೆಬ್ಸೈಟ್ ನಿಂದ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರಿಗೆ ಎರಡನೇ ಸ್ಥಾನ :
CBSE 12ನೇ ತರಗತಿ ಪರೀಕ್ಷೆಯ ಫಲಿತಾಂಶಗಳು ಪ್ರಕಟಗೊಂಡಿದ್ದು, ತಿರುವನಂತಪುರಂ ವಲಯದಲ್ಲಿ ಶೇ.98.82ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ.
ಇನ್ನು, ಶೇ.98.16 ಉತ್ತೀರ್ಣತೆಯೊಂದಿಗೆ ಬೆಂಗಳೂರು ವಲಯ ಎರಡನೇ ಸ್ಥಾನ ಮತ್ತು ಶೇ.97.79 ವಿದ್ಯಾರ್ಥಿಗಳು ಉತ್ತೀರ್ಣದೊಂದಿಗೆ ಚೆನ್ನೈ ವಲಯ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.