ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಮಾಹಿತಿ ನೀಡಿದ್ದು, ಕೊಪ್ಪಳದಲ್ಲಿ ನಡೆದ ಕುಟುಂಬದ ಜನ್ಮದಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡುಮರಳುವಾಗ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಕೊನೆಯುಸಿರೆಳೆದಿದ್ದರು. ವಾಹನದಲ್ಲಿ ಒಂಬತ್ತು ಜನರು ಪ್ರಯಾಣಿಸುತ್ತಿದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment