ನಮ್ಮ ರಾಷ್ಟ್ರಪಕ್ಷಿ ನವಿಲಿನ ವಿಶೇಷತೆ ನಿಮಗೆ ಗೊತ್ತಾ?

ನವಿಲು ನಮ್ಮ ರಾಷ್ಟ್ರಪಕ್ಷಿಯಾಗಿದ್ದು, ನವಿಲು ತನ್ನ ಸೌಂದರ್ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದ್ದು, ಹಿಂದೂ ಧರ್ಮದಲ್ಲಿ ನವಿಲುಗಳನ್ನು ಪವಿತ್ರವೆಂದು ಪರಿಗಣಿಸಲಾಗುತ್ತೆ. ಹೌದು, ಶಿವ ಮತ್ತು ಪಾರ್ವತಿಯ ಎರಡನೇ ಮಗ ಕಾರ್ತಿಕೇಯ (ಷಣ್ಮುಖ). ಭಾರತದ ದಕ್ಷಿಣ…

peacocks vijayaprabha news

ನವಿಲು ನಮ್ಮ ರಾಷ್ಟ್ರಪಕ್ಷಿಯಾಗಿದ್ದು, ನವಿಲು ತನ್ನ ಸೌಂದರ್ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದ್ದು, ಹಿಂದೂ ಧರ್ಮದಲ್ಲಿ ನವಿಲುಗಳನ್ನು ಪವಿತ್ರವೆಂದು ಪರಿಗಣಿಸಲಾಗುತ್ತೆ.

ಹೌದು, ಶಿವ ಮತ್ತು ಪಾರ್ವತಿಯ ಎರಡನೇ ಮಗ ಕಾರ್ತಿಕೇಯ (ಷಣ್ಮುಖ). ಭಾರತದ ದಕ್ಷಿಣ ಭಾಗದಲ್ಲಿ ಈತನನ್ನು ಅತಿ ಹೆಚ್ಚಾಗಿ ಪೂಜಿಸಲಾಗುತ್ತದೆ. ನವಿಲು ಫಾಸಿನಿಡೆ ಕುಟುಂಬಕ್ಕೆ ಸೇರಿದ ಒಂದು ಹಕ್ಕಿ. ಇದು ಭಾರತದ ರಾಷ್ಟ್ರೀಯ ಪಕ್ಷಿಯಾಗಿದ್ದು, ನವಿಲುಗಳಲ್ಲಿ ಭಾರತೀಯ ನವಿಲು, ಹಸಿರು ನವಿಲು, ಕಾಂಗೋ ನವಿಲು ಎಂದು ಮೂರು ವಿಧ.

ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿದ್ದು, ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಚಿತ್ರವಿದ್ದು, ಹೆಣ್ಣು ನವಿಲು ಹಸಿರು ಬಣ್ಣದ ಕುತ್ತಿಗೆ ಹಾಗೂ ಮಸುಕು ಕಂದು ಬಣ್ಣದ ಚಿಕ್ಕ ಗರಿಗಳ ಗುಚ್ಛವನ್ನು ಹೊಂದಿರುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.