ದಾವಣಗೆರೆ: ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಹ ಧನ

ದಾವಣಗೆರೆ ಜು.27 :2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪ್ರೋತ್ಸಹ ಧನಕ್ಕಾಗಿ ಆನ್‍ಲೈನ್…

scholarship vijayaprabha

ದಾವಣಗೆರೆ ಜು.27 :2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪ್ರೋತ್ಸಹ ಧನಕ್ಕಾಗಿ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್.31 ಕೊನೆಯ ದಿನಾಂಕ ವಾಗಿರುತ್ತದೆ.

ದ್ವಿತೀಯ ಪಿ.ಯು.ಸಿ, ಡಿಪ್ಲೊಮಾ, ಪಾಲಿಟೆಕ್ನಿಕ್/ಪದವಿ/ಸ್ನಾತಕೋತ್ತರ/ಬಿ.ಇ ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿ ಹಾಗೂ ಆನ್‍ಲೈನ್ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.