ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 3ನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹೌದು, ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು,ನಿನ್ನೆ ಶಫೀಕ್ (27), ಝಾಕೀರ್ (29) ಎಂಬುವವರನ್ನು ಬಂಧಿಸಲಾಗಿತ್ತು. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಕೊಂದ ಕೇರಳದ ಆರೋಪಿಗಳಿಗೆ ಇವರು ಸಹಕರಿಸಿರುವ ಆರೋಪ ಕೇಳಿಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.