ವಿಜಯನಗರ: ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವುದನ್ನು ನೋಡಲು ಹೋದ ರೈತ ಉಂಚೋಟಿ ಬೊಮ್ಮಪ್ಪ (55) ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ, ವಿಜಯನಗರದ ಹೊಸಪೇಟೆ ತಾಲೂಕಿನ ಗರಗ ನಾಗಲಾಪುರದಲ್ಲಿ ನಡೆದಿದೆ.
ಹೌದು, ಧಾರಾಕಾರ ಮಳೆಯಿಂದ ಬೆಳೆಗಳು ಜಲಾವೃತವಾಗಿದ್ದು, ಆಗಿರುವ ಅನಾಹುತ ನೋಡಲು ರೈತ ಉಂಚೋಟಿ ಬೊಮ್ಮಪ್ಪ ತೆರಳಿದ್ದಾರೆ. ಈ ವೇಳೆ ಹಳ್ಳ ಉಕ್ಕಿ ಹರಿಯುತ್ತಿದ್ದು, ನೀರಿಗೆ ಇಳಿಯದಂತೆ ಸ್ಥಳೀಯರು ಎಚ್ಚರಿಸಿದ್ದಾರೆ.
ಆದರೂ ಅವರ ಮಾತು ಲೆಕ್ಕಿಸದ ಬೊಮ್ಮಪ್ಪ ಜಮೀನಿಗೆ ಹೋಗಿ, ಅಲ್ಲಿಂದ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿಯೇ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು,ಆತನ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.