ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ ಅನಿರುದ್ಧ್ ಶ್ರವಣ್ ಅವರು ಆದೇಶಿಸಿದ್ದಾರೆ.
ಇಂದಿನಿಂದ ಆ.28ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ನಡೆಸಬಹುದಾದ ಅವ್ಯವಹಾರಗಳನ್ನು ತಡೆಗಟ್ಟಲು ಕೇಂದ್ರದ ಸುತ್ತ-ಮುತ್ತಲು 200ಮೀ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಹಾಗೂ ಪರೀಕ್ಷೆ ನಡೆಯಲಿರುವ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪರೀಕ್ಷೆ ನಡೆಯಲಿರುವ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಆದೇಶವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಹಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.