ತ್ರಿಪುರಾ: ರಾಜ್ಯದ ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸುಶಾಂತ ಚಕ್ರವರ್ತಿ ಸೇರಿದಂತೆ ಕನಿಷ್ಠ ನಾಲ್ವರು ಕಾಂಗ್ರೆಸ್ ನಾಯಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೌದು, ಈ ಘಟನೆ ಗುರುವಾರ ರಾಣಿರ್ ಬಜಾರ್ ಪ್ರದೇಶದಲ್ಲಿ ಸಂಭವಿಸಿದ್ದು, ಗಾಯಗೊಂಡಿರುವ ಶಾಸಕ ರಾಯ್ ಬರ್ಮನ್ ಮತ್ತು ಚಕ್ರವರ್ತಿ ಹಾಗೂ ಮತ್ತೊಬ್ಬ ನಾಯಕಿ ಸುಮನಾ ಸಹಾ ಅವರನ್ನು ಇಲ್ಲಿನ ಜಿಬಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು,ಯಾರು, ಯಾವ ಕಾರಣಕ್ಕೆ ದಾಳಿ ಮಾಡಿದರು ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.



