ಕೂಡ್ಲಿಗಿ: ಹೊಲಕ್ಕೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ನಡೆದಿದೆ.
ಹೌದು, ರೈತ ಕೇಶವ್ ಎನ್ನುವವರು ಎಂದಿನಂತೆ ಇಂದು ಮುಂಜಾನೆ ಹೊಲಕ್ಕೆ ಹೋದಾಗ ಕರಡಿ ದಾಳಿ ಮಾಡಿದ್ದು, ಗಾಯಗೊಂಡ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈಚೆಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕರಡಿ ಹಾವಳಿ ಹೆಚ್ಚಿದ್ದು, ಜನರು ಭಯದಲ್ಲೇ ಓಡಾಡುವಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.