ಬರೋಬ್ಬರಿ 215 ಕೋಟಿ ಸುಲಿಗೆ ಪ್ರಕರಣದಲ್ಲಿ ಕನ್ನಡದ ವಿಕ್ರಾಂತ್ ರೋಣ ಸಿನಿಮಾದಲ್ಲಿ ರಾ ರಾ ರಕ್ಕಮ್ಮ ಹಾಡಿಗೆ ಸೊಂಟ ಬಳಕಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ ಹೆಸರಿಸಿದ್ದು, ಇಂದು ಬಾಲಿವುಡ್ ನಟಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ಹೌದು, ಜಾಕ್ವೆಲಿನ್ ಫರ್ನಾಂಡಿಸ್ ಸಹ ಈ ಸುಲಿಗೆ ಹಣದ ಫಲಾನುಭವಿ ಎಂದು ಇಡಿ ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿದ್ದು, ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ವಂಚಕ ಎಂದು ಆಕೆಗೆ ಮೊದಲೆ ತಿಳಿದಿತ್ತು ಎಂದು ಇಡಿ ಉಲ್ಲೇಖಿಸಿದೆ.
ಈ ಹಿಂದೆ ಸುಕೇಶ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಕಳುಹಿಸಿದ್ದನ್ನು ಇಡಿ ಪತ್ತೆ ಹಚ್ಚಿತ್ತು. ಈ ಮೊದಲು ನಟಿ ಜಾಕ್ವೆಲಿನ್ 7 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.