ಗ್ರಾಮ ಒನ್​ಗೆ ಇನ್ನಷ್ಟು ಸೇವೆಗಳ ಸೇರ್ಪಡೆ: ಸಿಎಂ ಮಹತ್ವದ ಸೂಚನೆ

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ “ಗ್ರಾಮ ಒನ್” ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೌದು, ಗೃಹ ಕಚೇರಿ ಕೃಷ್ಣಾದಲ್ಲಿ…

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ “ಗ್ರಾಮ ಒನ್” ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೌದು, ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ‘ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಕ್ರಮ ಕೈಗೊಳ್ಳುಬೇಕು ಎಂದು ಹೇಳಿದರು.

ಇನ್ನು, ‘ಗ್ರಾಮ ಒನ್ ಕೇಂದ್ರಗಳಲ್ಲಿ ಮೈಕ್ರೋ ಬ್ಯಾಂಕಿಂಗ್, LPG ಬುಕಿಂಗ್ ಸೇರಿದಂತೆ ಜನರಿಗೆ ಬೇಕಾದ ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ಸಿಎಂ ತಿಳಿಸಿದರು. ರಾಜ್ಯದಲ್ಲಿ ಈವರೆಗೆ ಒಟ್ಟು 7274 ಗ್ರಾಮ ಒನ್ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.