ದಾವಣಗೆರೆ: ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಪಟುಗಳ ಆಯ್ಕೆ

ದಾವಣಗೆರೆ : ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತವಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಬೆಂಗಳೂರು ವಿದ್ಯಾನಗರದಲ್ಲಿರುವ…

Khelo-India-vijayaprabha-news

ದಾವಣಗೆರೆ : ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತವಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಬೆಂಗಳೂರು ವಿದ್ಯಾನಗರದಲ್ಲಿರುವ ಶ್ರೀ ಜಯ ಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ ಕ್ರೀಡಾಶಾಲೆ ಇಲ್ಲಿ ಆಗಷ್ಟ್ 23 ಮತ್ತು 24 ರಂದು ಆಯ್ಕೆ ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ.

ಭಾಗವಹಿಸುವ ಕ್ರೀಡಾಪಟುಗಳು (ಆಯ್ಕೆ ಸಮಯದಲ್ಲಿ) ದಿನಾಂಕ 01 ಜೂನ್ 2022 ಕ್ಕೆ 14 ವರ್ಷ ಮೇಲ್ಪಟ್ಟವರಾಗಿದ್ದು, 23 ವರ್ಷ ಒಳಪಟ್ಟವರಾಗಿರಬೇಕು. ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ 2 ವರ್ಷಗಳ ವಯೋಮಿತಿಯನ್ನು ಸಡಿಲಗೊಳಿಸಲಾಗಿದೆ. ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಗರಿಷ್ಟ ವಯೋಮಿತಿಯನ್ನು ಸಾಮಥ್ರ್ಯದ ಆಧಾರದ ಮೇಲೆ ನಿಗದಿಪಡಿಸಲಾಗುವುದು.

ಆಸಕ್ತ ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಈಜು ಕ್ರೀಡಾಪಟುಗಳು ಪ್ರವೇಶ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ಕೀಡಾಂಗಣ, ದಾವಣಗೆರೆ ಇಲ್ಲಿ ಕಛೇರಿ ವೇಳೆಯಲ್ಲಿ ಪಡೆದು ಆಯ್ಕೆಯಲ್ಲಿ ಭಾಗವಹಿಸಬಹುದು.

Vijayaprabha Mobile App free

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08192-237480 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.