ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್: BPL ಕಾರ್ಡ್ ರದ್ದಾದರೆ ಸರ್ಕಾರಿ ಸೌಲಭ್ಯ ಕಟ್..!

ಸುಳ್ಳು ಮಾಹಿತಿ ನೀಡಿ ಬಿಪಿಎಲ್ -ಅಂತ್ಯೋದಯ ಕಾರ್ಡ್‌ಗಳನ್ನು ಪಡೆದುಕೊಂಡಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅನರ್ಹ ಪಡಿತರ ಚೀಟಿದಾರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ,…

ration-card-vijayaprabha-news

ಸುಳ್ಳು ಮಾಹಿತಿ ನೀಡಿ ಬಿಪಿಎಲ್ -ಅಂತ್ಯೋದಯ ಕಾರ್ಡ್‌ಗಳನ್ನು ಪಡೆದುಕೊಂಡಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅನರ್ಹ ಪಡಿತರ ಚೀಟಿದಾರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಸಕ್ಕರೆ ಸೇರಿದಂತೆ ಇತರೆ ಪದಾರ್ಥ ಪಡೆದುಕೊಳ್ಳುತ್ತಿದ್ದು, ಇಂತಹ 3 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್‌ಗಳನ್ನು ಸರ್ಕಾರ ರದ್ದುಪಡಿಸಲಿದೆ.

ಹೌದು, ರಾಜ್ಯಾದ್ಯಂತ ಅನರ್ಹರು ಪಡೆದುಕೊಂಡಿರುವ BPL ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಸರ್ಕಾರ ರದ್ದುಗೊಳಿಸುತ್ತಿದ್ದು, ಈ ಮೂಲಕ ಕಾರ್ಡ್ ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, RTO ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ.

ಇನ್ನು, ಅನರ್ಹರು ಪಡಿತರ ಪಡೆದುಕೊಳ್ಳುತ್ತಿದ್ದ ದಿನದಿಂದ ಈವರೆಗೆ ಎಷ್ಟು ಆಹಾರ ಪದಾರ್ಥ ಪಡೆದಿದ್ದಾರೆ ಎಂಬುದನ್ನು ಲೆಕ್ಕ ಹಾಕಿ ಕೆಜಿಗೆ 35 ರೂ.ನಂತೆ ವಸೂಲಿ ಮಾಡಲಾಗುತ್ತದೆ. ಅಲ್ಲದೆ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.