ದಾವಣಗೆರೆ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಬರೋಬ್ಬರಿ 1.14 ಕೋಟಿ ನಷ್ಟ!

ದಾವಣಗೆರೆ ಆ.22 : ಜಿಲ್ಲೆ ಯಲ್ಲಿ ಆಗಸ್ಟ್ 21 ರಂದು ಬಿದ್ದ ಮಳೆಯ ವಿವರದನ್ವಯ 5.8ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 114.50 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ…

rain damage vijayaprabha news

ದಾವಣಗೆರೆ ಆ.22 : ಜಿಲ್ಲೆ ಯಲ್ಲಿ ಆಗಸ್ಟ್ 21 ರಂದು ಬಿದ್ದ ಮಳೆಯ ವಿವರದನ್ವಯ 5.8ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 114.50 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 4.6ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 4.7ಮಿ.ಮೀ ಹಾಗೂ ವಾಸ್ತವ ಮಳೆ 10.3ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 3.7ಮಿ.ಮೀ ಹಾಗೂ ವಾಸ್ತವ ಮಳೆ 8.0ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.0ಮಿ.ಮೀ ಹಾಗೂ ವಾಸ್ತವ ಮಳೆ 3.1ಮಿ.ಮೀ, ಜಗಳೂರು ವಾಡಿಕೆ ಮಳೆ 3.2 ಮಿ.ಮೀ ಹಾಗೂ ವಾಸ್ತವ ಮಳೆ 2.8ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 3.7ಮಿ.ಮೀ ಹಾಗೂ ವಾಸ್ತವ ಮಳೆ 6.3ಮಿ.ಮೀ ಮಳೆಯಾಗಿದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 10 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 50.00 ಲಕ್ಷ, 19 ಪಕ್ಕಾಮನೆ ಭಾಗಶ: ಹಾನಿಯಾಗಿದ್ದು, ರೂ. 57.00 ಲಕ್ಷ, ಒಟ್ಟು ರೂ.107.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

Vijayaprabha Mobile App free

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.3.00 ಲಕ್ಷ, 3 ಪಕ್ಕಾ ಮನೆ ಭಾಗಶ: ಹಾನಿ ಯಾಗಿದ್ದು, ರೂ. 1.00 ಲಕ್ಷ, 2 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.2.50 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಒಟ್ಟು ರೂ.7.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ 114.50 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.