BREAKING: 2 ಲಕ್ಷ ರೂ ಪರಿಹಾರ ಘೋಷಣೆ

ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, PMNRF ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ…

Narendra modi vijayaprabha news

ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, PMNRF ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಇನ್ನು, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಅನೇಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಈ ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಅಂತ್ಯ ಕಂಡಿದ್ದು, ಲಾರಿ ಓವರ್‌ಟೇಕ್‌ ಮಾಡುವ ವೇಳೆ ಕ್ರೂಸರ್ ಅಪಘಾತಕ್ಕೀಡಾಗಿದೆ. ಕ್ರೂಸರ್‌ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ರಾಯಚೂರು ಮೂಲದವರು ಎನ್ನಲಾಗಿದೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.