ಬೆಂಗಳೂರು: ಶಾಲೆಗಳ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಬಿಸಿಯೂಟದ ಅಡುಗೆ ಸಿಬ್ಬಂದಿ ಸರ್ಕಾರದ ಪೂರ್ಣಕಾಲಿಕ ನೌಕರರಲ್ಲ. ಅವರು ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅಡುಗೆ ಸಿಬ್ಬಂದಿಯ ವಾಸ ಸ್ಥಳವನ್ನು ಪರಿಶೀಲಿಸಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮವಹಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



