ಮಹಿಳೆಯರನ್ನು ಸಾಮಾನ್ಯವಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್‌ಗಳು ಕಾಡುತ್ತವೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಡುವ ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ದೇಶದ ಮೊದಲ ಲಸಿಕೆ ಬಿಡುಗಡೆಯಾಗಲಿದೆ.
ಹೌದು, ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (DBT) ಈ ವ್ಯಾಕ್ಸಿನ್ ಅಭಿವೃದ್ಧಿಪಡಿಸಿದ್ದು, ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿದ ಕ್ವಾಡ್ರೈವೆಲೆಂಟ್ ಹ್ಯೂಮನ್ ಪ್ಯಾಪಿಲೋಮ ವೈರಸ್ ಲಸಿಕೆ ಪ್ರಾರಂಭಿಸಲು ಸಜ್ಜಾಗಿದೆ.
ಇದನ್ನು 9-14 ವರ್ಷದ ಬಾಲಕಿಯರಿಗೆ ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಡಿ ನೀಡಲಾಗುವುದು. ಇದು ಸಂಪೂರ್ಣ ಮೇಡ್ ಇನ್ ಇಂಡಿಯಾ ಲಸಿಕೆ ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ.ಎನ್.ಕೆ.ಅರೋರಾ ಹೇಳಿದ್ದಾರೆ.