ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಮೇಲೆ ಮುರುಘಾ ಶರಣರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಈ ಹಿನ್ನೆಲೆ ಮುರುಘಾ ಮಠದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮುರುಘಾ ಮಠದ ಆವರಣದೊಳಗೆ ಯಾರಿಗೂ ಪ್ರವೇಶವಿಲ್ಲ. ಗೇಟ್ ಮುಚ್ಚಲಾಗಿದ್ದು, ಮಠದ ಸಿಬ್ಬಂದಿಗೆ ಮಾತ್ರ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿದೆ. ಶ್ರೀಗಳನ್ನು ಬಂಧಿಸಿದ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ಭಕ್ತರು ಪ್ರತಿಭಟನೆ ನಡೆಸಬಹುದು. ಹೀಗಾಗಿ ಒಂದು ಕೆಎಸ್‌ಆರ್‌ಪಿ ಹಾಗೂ ಡಿಎಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.