BIG NEWS: ಮುರುಘಾ ಶ್ರೀಗಳಿಗೆ ಹೃದಯಾಘಾತ!

ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ ಶ್ರೀಗಳು…

Muruga Math Shri

ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ ಶ್ರೀಗಳು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆ ಹೆಚ್ಚಿನ ತಪಾಸಣೆಗಾಗಿ ಚಿತ್ರದುರ್ಗ ಡಿಸಿ ಆದೇಶದಂತೆ ಇಬ್ಬರು ಹೃದ್ರೋಗ ತಜ್ಞರನ್ನು ಕರೆಸಲಾಗಿದೆ.

ಹೌದು, ಡಿಎಚ್ಒ ಡಾ.ರಂಗನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಶ್ರೀಗಳು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ನಮ್ಮಲ್ಲಿರುವ ಎಲ್ಲಾ ತಪಾಸಣೆ ಮಾಡಲಾಗಿದೆ. ಶ್ರೀಗಳಿಗೆ 60 ವರ್ಷ ವಯಸ್ಸಾಗಿದ್ದು ದೇಹ ತುಂಬಾ ಸೂಕ್ಷ್ಮ ಆಗಿದೆ. ಹೃದಯ ತಜ್ಞರ ಸಲಹೆ ಮೇರೆ ಮುಂದೇನು ಎಂಬ ಬಗ್ಗೆ ನಿರ್ಧಾರ ಆಗಲಿದೆ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.