ಮಹತ್ವದ ಆದೇಶ: ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ರಾಜ್ಯ ಸರ್ಕಾರ; ಲೋಕಾಯುಕ್ತಕ್ಕೆ ಪರಮಾಧಿಕಾರ!

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸಿಬಿ ಸಂಸ್ಥೆಯನ್ನು (ಭ್ರಷ್ಟಾಚಾರ ನಿಗ್ರಹ ದಳ –ACB) ರದ್ದುಗೊಳಿಸಿ ಆದೇಶ ಹೊರಡಿಸಿದ್ದು, ಉಚ್ಚ ನ್ಯಾಯಾಲಯ 11.08.2022 ರಂದು ನೀಡಿರುವ ತೀರ್ಪಿನಲ್ಲಿನ ಅಂಶಗಳನ್ನು ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ…

acb-karnataka-vijayaprabha-news

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸಿಬಿ ಸಂಸ್ಥೆಯನ್ನು (ಭ್ರಷ್ಟಾಚಾರ ನಿಗ್ರಹ ದಳ –ACB) ರದ್ದುಗೊಳಿಸಿ ಆದೇಶ ಹೊರಡಿಸಿದ್ದು, ಉಚ್ಚ ನ್ಯಾಯಾಲಯ 11.08.2022 ರಂದು ನೀಡಿರುವ ತೀರ್ಪಿನಲ್ಲಿನ ಅಂಶಗಳನ್ನು ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರ ನೀಡಲಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪುಸ್ತುತ ಬಾಕಿಯಿರುವ ತನಿಖೆಗಳು ವಿಚಾರಣೆಗಳು/ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಗೆ ವರ್ಗಾಯಿಸುವುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.